ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಾಗಿದ್ದು, ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ಕಂಗನಾ ರಣಾವತ್ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಇತ್ತೀಚೆಗೆ ಅವರು ಪಾಕಿಸ್ತಾನದ ವಿರುದ್ಧ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಸ್ಟೋರಿ ಹಾಕಿರುವ ನಟಿ, ‘ಜಿರಳೆಗಳು… ಭಯಾನಕ, ಭಯಾನಕ ರಾಷ್ಟ್ರ ಭಯೋತ್ಪಾದಕರಿಂದ ತುಂಬಿದ್ದು… ವಿಶ್ವ ಭೂಪಟದಿಂದಲೇ ಅಳಿಸಿಹಾಕಬೇಕು’ ಎಂದು ಬರೆದುಕೊಂಡಿದ್ದಾರೆ.
ಭಾರತದ ಮಿಲಿಟರಿ ಪ್ರತಿಕ್ರಿಯೆಗೆ ಕಂಗನಾ ಬೆಂಬಲ ವ್ಯಕ್ತಪಡಿಸುತ್ತಿರುವುದು ಇದೇ ಮೊದಲಲ್ಲ. ಅವರು ಈ ಹಿಂದೆ S-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಶ್ಲಾಘಿಸುವ ವಿಡಿಯೋವನ್ನು ಹಂಚಿಕೊಂಡಿದ್ದರು.