Tuesday, October 7, 2025

ಪಾಕ್ ಜಾಗತಿಕ ಭೂಪಟದಲ್ಲಿ ಉಳಿಯಲು ಬಯಸಿದರೆ ಭಯೋತ್ಪಾದನೆ ನಿಲ್ಲಿಸಬೇಕು: ಸೇನಾ ಮುಖ್ಯಸ್ಥ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನ ಜಾಗತಿಕ ಭೂಪಟದಲ್ಲಿ ಉಳಿಯಲು ಬಯಸಿದರೆ ಭಾರತದೊಳಗೆ ಭಯೋತ್ಪಾದನೆಯನ್ನು ಪ್ರಾಯೋಜಿಸುವುದನ್ನು ನಿಲ್ಲಿಸಬೇಕು ಎಂದು ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಸಿದ್ದಾರೆ.

ಇಂದು ಘಡ್ಶಾನಾ ಗ್ರಾಮದಲ್ಲಿ ಭಾರತೀಯ ಸೇನಾ ಕಂಟೋನ್ಮೆಂಟ್‌ನಲ್ಲಿ ಮಾತನಾಡುತ್ತಾ ಜನರಲ್ ದ್ವಿವೇದಿ, ಪಾಕಿಸ್ತಾನದಲ್ಲಿ 9 ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸುವಲ್ಲಿ ಮತ್ತು 100ಕ್ಕೂ ಹೆಚ್ಚು ಉಗ್ರಗಾಮಿಗಳ ಹತ್ಯೆಗೆ ಕಾರಣವಾದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಯಶಸ್ಸನ್ನು ವಿವರಿಸಿದರು.

ಈ ಬಾರಿ ನಾವು ಆಪರೇಷನ್ ಸಿಂದೂರ್ 1.0ರಲ್ಲಿ ತೋರಿದ ಅದೇ ಸಂಯಮವನ್ನು ಕಾಯ್ದುಕೊಳ್ಳುವುದಿಲ್ಲ. ಈ ಬಾರಿ ಪಾಕಿಸ್ತಾನವು ಭೌಗೋಳಿಕವಾಗಿ ಇರಬೇಕೇ ಅಥವಾ ಬೇಡವೇ ಎಂದು ಯೋಚಿಸಬೇಕಾದ ಕೆಲಸವನ್ನು ನಾವು ಮಾಡುತ್ತೇವೆ. ಪಾಕಿಸ್ತಾನ ಭೌಗೋಳಿಕವಾಗಿ ಇರಬೇಕೆಂದು ಬಯಸಿದರೆ ಅದು ಭಯೋತ್ಪಾದನೆಯನ್ನು ನಿಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.

ಸೇನಾ ಮುಖ್ಯಸ್ಥ ದ್ವಿವೇದಿ ಇಂದು ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಮಹತ್ವದ ಕೊಡುಗೆಗಳಿಗಾಗಿ ಮಾಜಿ ಸೈನಿಕರಾದ ಲೆಫ್ಟಿನೆಂಟ್ ಕರ್ನಲ್ ಹೆಮ್ ಸಿಂಗ್ ಶೇಖಾವತ್ (ನಿವೃತ್ತ), ಲೆಫ್ಟಿನೆಂಟ್ ಕರ್ನಲ್ ಬಿರ್ಬಲ್ ಬಿಷ್ಣೋಯ್ (ನಿವೃತ್ತ), ರಿಸಲ್ದಾರ್ ಭನ್ವರ್ ಸಿಂಗ್ (ನಿವೃತ್ತ) ಮತ್ತು ಹವ್ ನಕತ್ ಸಿಂಗ್ (ನಿವೃತ್ತ) ಅವರನ್ನು ಸನ್ಮಾನಿಸಿದರು.

error: Content is protected !!