ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು ಕಾಣಿಸಿಕೊಂಡಿದೆ.
ಈ ಕುರಿತಂತೆ ಟೀಂ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಆತಿಥ್ಯದ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿದೆ. ಈ ಕಾರಣಕ್ಕಾಗಿಯೇ ಟೀಂ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು ಕಾಣಿಸಿಕೊಂಡಿದೆ ಎನ್ನುವ ಮಾತುಗಳು ಕೇಳಿ ಬರಲಾರಂಭಿಸಿವೆ.
ಭಾರತ ಕ್ರಿಕೆಟ್ ತಂಡವು ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಗುಂಪು ಹಂತದಲ್ಲಿ ಎರಡು ಬಾರಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಒಂದು ವೇಳೆ ಉಭಯ ತಂಡಗಳು ಫೈನಲ್ ಪ್ರವೇಶಿಸಿದರೆ ಮೂರನೇ ಬಾರಿಗೆ ಮುಖಾಮುಖಿಯಾಗಲಿವೆ.
ಏಷ್ಯಾಕಪ್ ಟೂರ್ನಿಯ ಆತಿಥ್ಯದ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿತ್ತು. ಆದರೆ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ, ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನದಲ್ಲಿ ಏಷ್ಯಾಕಪ್ ಆಡಲು ಹಿಂದೇಟು ಹಾಕಿತ್ತು. ಹೀಗಾಗಿ ಈ ಬಾರಿಯ ಏಷ್ಯಾಕಪ್ ಟೂರ್ನಿಯನ್ನು ಹೈಬ್ರೀಡ್ ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ 4 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಹಾಗೂ ಉಳಿದ 9 ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.