ಹೊಸದಿಗಂತ ಡಿಜಿಟಲ್ ಡೆಸ್ಕ್
ಇಸ್ಲಾಮಾಬಾದ್: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಸಲಹೆಯ ಮೇರೆಗೆ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳಲ್ಲಿ ವರದಿಯಾಗಿದೆ.
Pakistan President Arif Alvi dissolves National Assembly on the advice of Prime Minister Imran Khan: Pakistan Media
— ANI (@ANI) April 3, 2022
ಪಾಕಿಸ್ತಾನದ ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿದ ಸುಮಾರು ಒಂದು ತಿಂಗಳ ನಂತರ, ಇಂದು ನಿರ್ಣಾಯಕ ಮತದಾನ ನಡೆಯಬೇಕಿತ್ತು. ಆದರೆ ನಿರ್ಣಯವನ್ನು ಸ್ಪೀಕರ್ ವಜಾಗೊಳಿಸಿದ್ದು, ಹೈಡ್ರಾಮಾವೇ ನಡೆಯಿತು.
ಇಮ್ರಾನ್ ಖಾನ್ ಕೆಳಗಿಳಿಸಿ ಹಂಗಾಮಿ ಸರಕಾರ ರಚನೆಗೆ ಸಿದ್ಧತೆ ಆರಂಭವಾಯಿತು. ಅವಿಶ್ವಾಸ ಮತಕ್ಕೆ ಅವಕಾಶ ನೀಡದ ಡೆಪ್ಯುಟಿ ಸ್ಪೀಕರ್ ತೀರ್ಪಿನಿಂದ ಅಸೆಂಬ್ಲಿಯಲ್ಲಿ ಅವಿಶ್ವಾಸ ನಿರ್ಣಯ ಸ್ಥಗಿತಗೊಂಡಿದೆ. ಇಮ್ರಾನ್ ಖಾನ್ ಸದ್ಯಕ್ಕೆ ಪಾಕ್ ಪ್ರಧಾನಿಯಾಗಿ ಉಳಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಇಮ್ರಾನ್ ಖಾನ್ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸುವಂತೆ ನಾನು ಅಧ್ಯಕ್ಷರಿಗೆ ಸಲಹೆ ನೀಡುತ್ತೇನೆ. ಚುನಾವಣೆಗೆ ಸಿದ್ಧರಾಗಿ ಎಂದು ಪ್ರತಿಪಕ್ಷಗಳಿಗೆ ಇಮ್ರಾನ್ ಖಾನ್ ಹೇಳಿದರು.
ಬಳಿಕ ಇಮ್ರಾನ್ ಖಾನ್ ಪಾಕ್ ಅಧ್ಯಕ್ಷ ಆರಿಫ್ ಅಲ್ವಿ ಅವರನ್ನು ಭೇಟಿ ಮಾಡಿ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದರು. ಇಮ್ರಾನ್ ಖಾನ್ ಅವರ ಸಲಹೆಯ ಮೇರೆಗೆ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದರು ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.