ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ: ಶತ್ರುರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ ರಾಜನಾಥ್ ಸಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಾರ್ಗಿಲ್ ವಿಜಯ್ ದಿವಸ್ ಸ್ಮರಣಾರ್ಥ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶತ್ರುರಾಷ್ಟ್ರಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಭಾರತ ವಿಶ್ವದ ಶಕ್ತಿ ಶಾಲಿ ದೇಶವಾಗಿ ಬೆಳೆದಿದೆ. ಭಾರತವನ್ನು ಕೆಣಕಿದರೆ ಅದೆ ದಾಟಿಯಲ್ಲಿ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಭಾರತದ ಎಲ್ಲಾ ಸವಾಲು ಎದುರಿಸಲು ಶಕ್ತವಾಗಿದೆ. ಇದರ ಜೊತೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹೊಂದಿದೆ ದೇಶವಾಗಿದೆ ಎಂದಿದ್ದಾರೆ.
ಭಾರತದ ಶಾರದ ಶಕ್ತಿ ಕೇಂದ್ರ ಇನ್ನೊಂದು ರಾಷ್ಟ್ರದ ಗಡಿ ನಿಯಂತ್ರಣ ರೇಖೆಯಲ್ಲಿದೆ. ಇದು ಒಪ್ಪಲು ಸಾಧ್ಯವೇ? ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಭಾಗವೇ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಇಷ್ಟೇ ಅಲ್ಲಜವಾಹರ್ ಲಾಲ್ ನೆಹರೂ ಪ್ರಧಾನಿಯಾಗಿದ್ದಾಗ, ಲಡಾಖ್ ಪ್ರದೇಶವನ್ನು 1962ರಲ್ಲಿ ಚೀನಾ ಆಕ್ರಮಿಸಿಕೊಂಡಿತು. ನೆಹರೂ ಉದ್ದೇಶವನ್ನು ಪ್ರಶ್ನಿಸುವುದಿಲ್ಲ. ಆದರೆ ಅದೇ ನೀತಿ ಅನ್ವಯಿಸುವುದಿಲ್ಲ. ಆದರೆ ಇಂದು ಪರಿಸ್ಥಿತಿ ಅದಲ್ಲ, ಭಾರತ ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದು. ಹೀಗಾಗಿ ಭಾರತದ ಭೂಭಾಗ ಆಕ್ರಮಿಸಿದರೆ ಸುಮ್ಮನಿರುವ ಮಾತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಭಾರತದ ರಕ್ಷಣಾ ವ್ಯವಸ್ಥೆಯು ಅತ್ಯಂತ ವಿಶ್ವಾಸಾರ್ಹ. ಸುರಕ್ಷತಾ ಕಾರ್ಯವಿಧಾನಗಳು ಉತ್ತಮವಾಗಿದೆ ಆದರೂ ಆಕಸ್ಮಿಕವಾಗಿ ಪಾಕಿಸ್ತಾನದ ಕಡೆಗೆ ಭಾರತದ ಕ್ಷಿಪಣಿಯು ಉಡಾವಣೆಯಾಗಿದ್ದು ವಿಷಾದನೀಯ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದ್ದಾರೆ.
ದೈನಂದಿನ ನಿರ್ವಹಣೆ ಹಾಗೂ ತಪಾಸಣೆಯ ವೇಳೆ ಆಕಸ್ಮಿಕವಾಗಿ ಸಾಯಂಕಾಲ 7 ಗಂಟೆಗೆ ಭಾರತದ ಕ್ಷಿಪಣಿಯು ಪಾಕಿಸ್ತಾನದ ವಾಯುಗಡಿ ಪ್ರವೇಶಿಸಿತ್ತು. ಈ ಘಟನೆಯಲ್ಲಿ ಯಾರಿಗೂ ಹಾನಿಯಾಗಲಿಲ್ಲ. ಆದರೂ ಈ ಘಟನೆಗೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಾಚರಣೆ ಹಾಗೂ ನಿರ್ವಹಣೆಯ ಪರಿಶೀಲನೆ ನಡೆಸಲಾಗುತ್ತಿದೆ. ಘಟನೆಗೆ ಸ್ಪಷ್ಟವಾದ ಕಾರಣವನ್ನು ಕಂಡುಕೊಳ್ಳಲು ಉನ್ನತ ಮಟ್ಟದ ತನಿಖೆಯನ್ನು ನಡೆಸಲಾಗುತ್ತದೆ. ನಿರ್ವಹಣೆ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷಗಳು ಕಂಡುಬಂದರೆ ತಕ್ಷಣವೇ ಅದನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ದೇಶದ ಶಸ್ತ್ರಾಸ್ತ್ರ ವ್ಯವಸ್ಥೆಯ ಸುರಕ್ಷತೆ ಹಾಗೂ ಭದ್ರತೆಗೆ ನಾವು ಹೆಚ್ಚಿನ ಆದ್ಯತೆ ನೀಡುತ್ತೇವೆ. ರಕ್ಷಣಾ ಸಂಬಂಧಿ ಸುರಕ್ಷತಾ ಕಾರ್ಯವಿಧಾನಗಳನ್ನೂ ಆಗಾಗ ಪರಿಶೀಲಿಸಲಾಗುತ್ತದೆ. ಸಶಸ್ತ್ರ ಪಡೆಗಳು ಕ್ಷಿಪಣಿ ವ್ಯವಸ್ಥೆಯನ್ನು ನಿರ್ವಹಿಸಲು ಉತ್ತಮ ತರಬೇತಿಯನ್ನು ಪಡೆದಿವೆ. ಹೀಗಾಗಿ ಭಾರತದ ಕ್ಷಿಪಣಿ ವ್ಯವಸ್ಥೆಯು ಅತ್ಯಂತ ವಿಶ್ವಾಸಾರ್ಹ ಹಾಗೂ ಸುರಕ್ಷಿತವಾಗಿದೆ ಎಂದು ರಾಜನಾಥ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!