ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ವಿರುದ್ಧ ಪಾಕಿಸ್ತಾನ ಇಂದಿಗೆ 10 ಮಿಲಿಯನ್(1 ಕೋಟಿ) ಕೋವಿಡ್ ಲಸಿಕೆ ನೀಡುವುದನ್ನು ಪೂರ್ಣಗೊಳಿಸಿದ್ದು, ಈ ಮೂಲಕ ಮೂರನೇ ಅಲೆಯನ್ನು ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ ಸಾಂಕ್ರಾಮಿಕ ರೋಗವನ್ನು ನಿಭಾಯಿಸುತ್ತಿರುವ ರಾಷ್ಟ್ರೀಯ ಕಮಾಂಡ್ ಮತ್ತು ಆಪರೇಷನ್ ಸೆಂಟರ್(ಎನ್ಸಿಒಸಿ) ಮುಖ್ಯಸ್ಥ, ಯೋಜನಾ ಸಚಿವ ಅಸಾದ್ ಉಮರ್ 10 ಮಿಲಿಯನ್ ಡೋಸ್ ಲಸಿಕೆ ನೀಡುವಲ್ಲಿ ಯಶಸ್ಸು ಸಾಧಿಸಿರುವುದಾಗಿ ಘೋಷಿಸಿದರು. ಅಲ್ಲದೆ 70 ಮಿಲಿಯನ್ ನಾಗರಿಕರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ‘ಈ ವರ್ಷದ ಅಂತ್ಯದ ವೇಳೆಗೆ 70 ಮಿಲಿಯನ್ ಜನರಿಗೆ ಲಸಿಕೆ ನೀಡುವುದು ನಮ್ಮ ಗುರಿ’ ಎಂದರು.