ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ ನಿಂದ ಹೊರಬಂದ ಪಾಕಿಸ್ತಾನ: ಇನ್ಮುಂದೆ ಟೂರ್ನಮೆಂಟ್‌ನಲ್ಲಿ ಭಾಗವಹಿಸಲ್ಲ ಎಂದ ಪಿಸಿಬಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2025 ರ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಚಾಂಪಿಯನ್ಸ್ ಪಾಕಿಸ್ತಾನ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

ಇದೀಗ ಈ ಪಂದ್ಯಾವಳಿಯ ಅಂತ್ಯದ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ಪಂದ್ಯಾವಳಿಯಲ್ಲಿ ಮತ್ತೆ ಎಂದಿಗೂ ಭಾಗವಹಿಸದಿರಲು ತೀರ್ಮಾನಿಸಿದೆ.

ವಾಸ್ತವವಾಗಿ ಈ ಪಂದ್ಯಾವಳಿಯಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡ, ಪಾಕಿಸ್ತಾನ ಚಾಂಪಿಯನ್ಸ್ ಜೊತೆ ಆಡಲು ನಿರಾಕರಿಸಿದ್ದರಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. ಮೊದಲ ಗುಂಪು ಹಂತದಲ್ಲಿ ಈ ಎರಡೂ ತಂಡಗಳ ನಡುವೆ ಪಂದ್ಯ ನಡೆಯಬೇಕಿತ್ತು ಆದರೆ ಭಾರತೀಯ ಆಟಗಾರರು ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಆಡಲು ನಿರಾಕರಿಸಿದರು. ಆ ಬಳಿಕ ಸೆಮಿಫೈನಲ್‌ನಲ್ಲಿಯೂ ಪಾಕಿಸ್ತಾನದ ವಿರುದ್ಧ ಆಡಲು ನಿರಾಕರಿಸಿದ ಭಾರತ ತಂಡ ಟೂರ್ನಿಯಿಂದಲೇ ತನ್ನ ಹೆಸರನ್ನು ಹಿಂಪಡೆದುಕೊಂಡಿತು. ಆದಾಗ್ಯೂ ಲೀಗ್ ಪಂದ್ಯ ರದ್ದಾದರೂ ಭಾರತ ತಂಡಕ್ಕೆ ಅಂಕಗಳನ್ನು ನೀಡಲಾಯಿತು. ಹೀಗಾಗಿ WCL ಆಯೋಜಕರು ಭಾರತವನ್ನು ಬೆಂಬಲಿಸುತ್ತಿದ್ದಾರೆ ಎಂದು ಪಿಸಿಬಿ ಆರೋಪಿಸಿದ್ದು, ಈ ಲೀಗ್​ನಲ್ಲಿ ಆಡುವುದಕ್ಕೆ ಸಂಪೂರ್ಣ ನಿಷೇಧ ಹೇರಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ‘WCL ಟೂರ್ನಮೆಂಟ್‌ನಲ್ಲಿ ನಮ್ಮ ತಂಡ ಆಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇನ್ನು ಮುಂದೆ ಯಾವುದೇ ಆಟಗಾರನು ಈ ಟೂರ್ನಮೆಂಟ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ಪಿಸಿಬಿ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!