ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳೆಂದು ಗುರುತಿಸಿಕೊಂಡಿವೆ. ಆದರೆ ಮೈದಾನದಾಚೆಗೆ ಉಭಯ ದೇಶಗಳ ಆಟಗಾರರ ನಡುವೆ ಉತ್ತಮ ಬಾಂಧವ್ಯ ಹಾಗೂ ಒಡನಾಟಗಳಿವೆ.
ಇದೀಗ ಅಂತಹದ್ದೇ ಒಂದು ಘಟನೆ ಏಷ್ಯಾಕಪ್ ಟೂರ್ನಿಯು ನಡೆಯುತ್ತಿರುವ ಸಂದರ್ಭದಲ್ಲಿ ನಡೆದಿದೆ.
ಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಭಾನುವಾರ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ ಗ್ಯಾಪ್‌ನಲ್ಲಿ ಪಾಕಿಸ್ತಾನದ ಮಾರಕ ವೇಗಿ ಶಾಹೀನ್ ಅಫ್ರಿದಿ, ಇತ್ತೀಚೆಗಷ್ಟೇ ತಂದೆಯಾದ ಜಸ್ಪ್ರೀತ್ ಬುಮ್ರಾ ಅವರಿಗೆ ಒಂದು ಸರ್ಪ್ರೈಸ್ ಗಿಫ್ಟ್ ನೀಡಿದ್ದಾರೆ. ಈ ಸೌಹಾರ್ಧದ ನಡೆ ಕ್ರಿಕೆಟ್ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಇತ್ತೀಚೆಗಷ್ಟೇ ಜಸ್ಪ್ರೀತ್ ಬುಮ್ರಾ ಅವರ ಪತ್ನಿ ಸಂಜನಾ ಗಣೇಶನ್ ಗಂಡು ಮಗುವಿಗೆ ಜನ್ಮನೀಡಿದ್ದರು. ಈ ಗಂಡು ಮಗುವಿಗೆ ಅಂಗದ್ ಜಸ್ಪ್ರೀತ್ ಬುಮ್ರಾ ಎನ್ನುವ ಹೆಸರಿಡಲಾಗಿದೆ. ಇದೀಗ ಪಾಕ್ ಎಡಗೈ ವೇಗಿ ಶಾಹೀನ್ ಅಫ್ರಿದಿ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ. ಇದಾದ ಬಳಿಕ ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಶುಭ ಹಾರೈಸಿದ್ದಾರೆ.