ಭಾರತದ ದಾಳಿಗೆ ಪತರುಗುಟ್ಟಿದ ಪಾಕಿಸ್ತಾನ: ಗಡಿ ಭಾಗದ ಕ್ಯಾತೆಗೆ ಸದ್ಯಕ್ಕೆ ಫುಲ್‌ಸ್ಟಾಪ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕದನ ವಿರಾಮದ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮುಂದುವರೆಸಿದ್ದ ಶೆಲ್ ಹಾಗೂ ಡ್ರೋನ್ ದಾಳಿಗೆ ಭಾರತ ಸಿಟ್ಟಿಗೆದ್ದಿದ್ದು, ಆಪರೇಷನ್‌ ಸಿಂದೂರ ನಿಲ್ಲಿಸೋ ಮಾತೇ ಇಲ್ಲ ಎಂದಿತ್ತು. ಇದಕ್ಕೆ ಹೆದರಿದ ಪಾಕಿಸ್ತಾನ ಗಡಿಯಲ್ಲಿ ಕ್ಯಾತೆ ತೆಗೆಯುವುದನ್ನು ನಿಲ್ಲಿಸಿದೆ.

ಮೇ 10 ರಂದು ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದರೂ, ಪಾಕಿಸ್ತಾನ ಮಾತ್ರ ತನ್ನ ಉದ್ಧಟತನವನ್ನು ಬಿಟ್ಟಿರಲಿಲ್ಲ. ಗಡಿಯಲ್ಲಿ ಡ್ರೋನ್ ಹಾಗೂ ಕ್ಷಿಪಣಿಗಳ ದಾಳಿ ನಡೆಸಿದ್ದರು. ಇದರಿಂದ ಕೆಂಡಾಮಂಡಲಗೊಂಡಿರುವ ಭಾರತ, ಆಪರೇಷನ್ ಸಿಂಧೂರ್ ಇನ್ನೂ ಮುುಗಿದಿಲ್ಲ, ಮುಂದುವರೆಯಲಿದೆ. ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ್ದೇ ಆದರೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದಕರು ಮತ್ತು ಅವರ ಬೆಂಬಲಿಗರಿಗೆ ಇನ್ನು ಮುಂದೆ ಪಾಕಿಸ್ತಾನ ಸುರಕ್ಷಿತವಲ್ಲ ಎಂಬ ಸಂದೇಶವನ್ನು ಈಗಾಗಲೇ ರವಾನಿಸಲಾಗಿದೆ. ಒಂದು ಸ್ಥಳದಲ್ಲಿ ತರಬೇತಿ ಪಡೆದು, ನಂತರ ಮತ್ತೊಂದು ಸ್ಥಳಕ್ಕೆ ಹೋದರೆ ಸುರಕ್ಷಿತರೆಂದು ಭಾವಿಸಲು ಸಾಧ್ಯವಿಲ್ಲ. ಉಗ್ರರು ಎಲ್ಲಿಯೇ ಅಡಗಿದ್ದರೂ ಅವರ ಹುಟ್ಟಡಗಿಸುತ್ತೇವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ಖಡಕ್ ಎಚ್ಚರಿಕೆ ಬೆನ್ನಲ್ಲೇ ತಡರಾತ್ರಿ ಬಳಿಕ ಕಾಶ್ಮೀರ ಸೇರಿದಂತೆ ಗಡಿಯ 4 ರಾಜ್ಯಗಳಲ್ಲಿ ಎಲ್ಲಿಯೂ ಕದನ ವಿರಾಮ ಉಲ್ಲಂಘಿಸುವ ಗೋಜಿಗೆ ಹೋಗಿಲ್ಲ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!