ಭಾರತದ ವಿದೇಶಾಂಗ ನೀತಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್!‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಭಾರತದ ವಿದೇಶಾಂಗ ನೀತಿಯನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮೆಚ್ಚಿ ಹೊಗಳಿದ್ದಾರೆ.
ಖೈಬರ್ ಪಖ್ತುಂಕ್ವಾದ ಪ್ರಾಂತ್ಯದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಖಾನ್, ಅಮೆರಿಕದ ನಿರ್ಬಂಧಗಳ ಹೊರತಾಗಿಯೂ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಂಡಿರುವುದಕ್ಕೆ ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ್ದಾರೆ.
ʼಮೇ ಆಜ್ ಹಿಂದೂಸ್ತಾನ್ ಕೋ ದಾದ್ ದೇತಾ ಹೂಂʼ (ನಾನು ಇಂದು ಭಾರತಕ್ಕೆ ಸಲ್ಯೂಟ್ ಮಾಡುತ್ತೇನೆ). ಭಾರತವು ಯಾವಾಗಲೂ ಸ್ವತಂತ್ರ ವಿದೇಶಾಂಗ ನೀತಿಯನ್ನು ಅನುಸರಿಸಿದೆ ಎಂದು ಹೇಳಿದರು. ಭಾರತವು ಅಮೆರಿಕದೊಂದಿಗೆ ಕ್ವಾಡ್ ಮೈತ್ರಿಕೂಟದ ಸದಸ್ಯ ರಾಷ್ಟ್ರವಾಗಿದ್ದರೂ ಅದು ಇನ್ನೂ ತನ್ನನ್ನು ತಟಸ್ಥ ಎಂದು ಕರೆಯುತ್ತದೆ. ಅಮೇರಿಕ ನಿರ್ಬಂಧಗಳನ್ನು ಹೇರಿರುವ ರಷ್ಯಾದಿಂದಲೇ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಇದು ಹೇಗೆ ಸಾಧ್ಯವಾಗಿದೆಯೆಂದರೆ ಭಾರತದ ವಿದೇಶಾಂಗ ನೀತಿ ತನ್ನ ಜನರಿಗಾಗಿ ಕೆಲಸ ಮಾಡುತ್ತದೆ ಎಂದು ಪಾಕ್‌ ಪ್ರಧಾನಿ ಇಮ್ರಾನ್ ಖಾನ್ ಮೆಚ್ಚುಗೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!