Monday, August 15, 2022

Latest Posts

ಒಂಬತ್ತು ಭಯೋತ್ಪಾದಕರನ್ನು ಬಂಧಿಸಿದ ಪಾಕಿಸ್ತಾನ ಪೊಲೀಸರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪಂಜಾಬ್ ಪ್ರಾಂತ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿರುವ ಪಾಕಿಸ್ತಾನಿ ಪೊಲೀಸರು ಒಂಬತ್ತು ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಅವರಲ್ಲಿ ನಾಲ್ವರು ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕ ಗುಂಪಿಗೆ ಸೇರಿದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಸುಳಿವಿನ ಮೇರೆಗೆ ಪಂಜಾಬ್ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ಇಲಾಖೆ (CTD) ದಾಳಿ ನಡೆಸಿ ಒಂಬತ್ತು ಭಯೋತ್ಪಾದಕರನ್ನು ಬಂಧಿಸಿದೆ. ಬಂಧಿತ ಭಯೋತ್ಪಾದಕರಲ್ಲಿ ಹಲವರು ನಿಷೇಧಿತ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನದ (ಟಿಟಿಪಿ) ಹಾಗೂ ವಿವಿಧ ಉಗ್ರ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದಾರೆ. ಮತ್ತೊಬ್ಬ ಲಷ್ಕರ್-ಎ-ಜಾಂಗ್ವಿ (ಎಲ್‌ಇಜೆ) ಸಂಘಟನೆಯ ಸದಸ್ಯ ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ತನಿಖೆಗಾಗಿ ಉಗ್ರರನ್ನು ಅಜ್ಞಾತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ, ಬಂಧಿತ ಭಯೋತ್ಪಾದಕರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹೇಳದ್ದಾರೆ. ಕಳೆದ ವಾರ ಪಂಜಾಬ್ ಪ್ರಾಂತ್ಯದಲ್ಲಿ ಟಿಟಿಪಿ ಸಂಘಟನೆಗೆ ಸೇರಿದ 11 ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss