ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದಿಂದ ಪಾಕ್ನಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಇಮ್ರಾನ್ ಖಾನ್ ಬೆಂಬಲಿಗರು ಸಿಕ್ಕಸಿಕ್ಕಲ್ಲಿ ದಾಳಿ ಮಾಡುತ್ತಿದ್ದು, ಇದೀಗ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಲಾಹೋರ್ನಲ್ಲಿರುವ ಪ್ರಧಾನಿ ನಿವಾಸಕ್ಕೆ 500 ಕ್ಕೂ ಹೆಚ್ಚು ಬೆಂಬಲಿಗರು ಆಗಮಿಸಿದ್ದು, ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಬೆಳಗ್ಗೆಯೇ ದಾಳಿ ಮಾಡಿದ್ದು, ಮನೆಯಲ್ಲಿ ಈ ವೇಳೆ ವಾಚ್ಮನ್ ಮಾತ್ರ ಇದ್ದರು ಎನ್ನಲಾಗಿದೆ, ಅಷ್ಟೇ ಅಲ್ಲದೆ ಪೊಲೀಸ್ ಠಾಣೆಗೂ ಬೆಂಕಿ ಹಚ್ಚಿದ್ದಾರೆ.
ಪ್ರಧಾನಿ ನಿವಾಸಕ್ಕೆ ತಲುಪುವ ಮುನ್ನ ಮಾಡೆಲ್ ಟೌನ್ನಲ್ಲಿರುವ ಪಿಎಂಎಲ್-ಎನ್ ಸೆಕ್ರೆಟರಿಯೇಟ್ ಮೇಲೆ ದಾಳಿ ಮಾಡಿ ಅಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿತ್ತು.