May 15, 2026
Friday, May 15, 2026
spot_img

ಅಮೆರಿಕ-ಇರಾನ್ ಶಾಂತಿ ಮಾತುಕತೆಗೆ ಪಾಕಿಸ್ತಾನದಲ್ಲಿ ವೇದಿಕೆ ಸಿದ್ಧ: ಇಸ್ಲಾಮಾಬಾದ್‌ನಲ್ಲಿ ಬಿಗಿ ಭದ್ರತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯ ಸಂಘರ್ಷಕ್ಕೆ ಸದ್ಯ ಕದನ ವಿರಾಮ ಘೋಷಣೆಯಾಗಿದ್ದು, ಇದರ ಭಾಗವಾಗಿ ನಾಳೆ ಮಾತುಕತೆಗೆ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ವೇದಿಕೆ ಸಜ್ಜಾಗಿದ್ದು, ಅಮೇರಿಕನ್ ನಿಯೋಗದ ನೇತೃತ್ವ ವಹಿಸಲು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಶುಕ್ರವಾರ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಇರಾನ್ ಜೊತೆ ಮಾತುಕತೆಗಾಗಿ ಎದುರು ನೋಡುತ್ತಿದ್ದೇವೆ. ಅದು ಸಕಾರಾತ್ಮಕವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ವ್ಯಾನ್ಸ್ ಹೇಳಿದ್ದಾರೆ.

ಇರಾನ್ ಹಾಗೂ ಅಮೆರಿಕ ನಡುವೆ ಪ್ರಮುಖ ಮಧ್ಯವರ್ತಿಯಾಗಿರುವ ಪಾಕಿಸ್ತಾನವು ಈಗಾಗಲೇ ರಾಜಧಾನಿಯನ್ನು ಭದ್ರಕೋಟೆಯನ್ನಾಗಿ ಮಾರ್ಪಡಿಸಿದ್ದು, ಜೊತೆಗೆ ಶಾಂತಿ ಸಭೆಗೆ ಆಗಮಿಸುತ್ತಿರುವ ಇರಾನ್ ನಿಯೋಗಕ್ಕೆ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು ತನ್ನ ವಾಯುಸೇನೆಯ ಪಡೆಯನ್ನೇ ಮಧ್ಯಪ್ರಾಚ್ಯದಲ್ಲಿ ನಿಯೋಜಿಸಿದೆ.

ಈಗಾಗಲೇ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಗೆ ಎರಡು ದಿನಗಳ ಸಾರ್ವಜನಿಕ ರಜೆಯನ್ನು ಘೋಷಿಸಿದ್ದು, ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಇಸ್ಲಾಮಾಬಾದ್‌ ಸುತ್ತ ಸೇನೆಯನ್ನು ನಿಯೋಜಿಸಲಾಗಿದ್ದು, ರೇಂಜರ್‌ಗಳು ಮತ್ತು ಪೊಲೀಸರು ಸಹ ಪ್ರದೇಶದಾದ್ಯಂತ ಬೀಡುಬಿಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !