ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷ ನಡುವೆ ಭಾರತ ಪಾಕ್ ನ ನೂರ್ ಖಾನ್ ವಾಯುನೆಲೆ ಮೇಲೆ ಹಾರಿಸಿದ್ದ ಕ್ಷಿಪಣಿಯ ಸ್ಯಾಟ್‌ಲೈಟ್ ಚಿತ್ರಗಳು ಬಿಡುಗಡೆಯಾಗಿದೆ.
ಚೀನಾದ ಉಪಗ್ರಹ ಸಂಸ್ಥೆ (MIZAZVISION) ಬಿಡುಗಡೆ ಮಾಡಿದ ಉಪಗ್ರಹ ಚಿತ್ರಣವು ಭಾರತೀಯ ಸಶಸ್ತ್ರ ಪಡೆಗಳ ದಾಳಿಯ ನಂತರ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆಯಲ್ಲಿನ ಹಾನಿಯನ್ನು ತೋರಿಸಿದೆ.
ರಾವಲ್ಪಿಂಡಿಯ ಚಕ್ಲಾಲಾದಲ್ಲಿರುವ ಪಾಕಿಸ್ತಾನ ವಾಯುಪಡೆಯ ನೆಲೆ ನೂರ್ ಖಾನ್, ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ನಿಂದ ಸುಮಾರು 10 ಕಿ.ಮೀ ದೂರದಲ್ಲಿದೆ. ಪಿಂಡಿ ವಾಯು ನೆಲೆ ಸೇರಿದಂತೆ ಹಲವು ಕಡೆ ಭಾರತ ಅತೀ ದೊಡ್ಡ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ದಾಳಿ ಮಾಡಲು ಬ್ರಹ್ಮೋಸ್ ಕ್ಷಿಪಣಿಗಳ ಬಳಕೆಯಾಗಿದೆ ಎಂದು ಭಾರತ ಹೇಳಿದೆ. 90 ನಿಮಿಷಗಳಲ್ಲಿ ಭಾರತವು ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ, ಶೋರ್ಕೋಟ್‌ನ ರಫೀಕಿ ವಾಯುನೆಲೆ, ಪಂಜಾಬ್‌ನ ಮುರಿಯದ್ ವಾಯುನೆಲೆ, ಸಿಂಧ್‌ನ ಸುಕ್ಕೂರ್ ವಾಯುನೆಲೆ, ಸಿಯಾಲ್‌ಕೋಟ್ ವಾಯುನೆಲೆ, ಪಸ್ರೂರ್ ವಾಯುನೆಲೆ, ಸರ್ಗೋಧಾ ವಾಯುನೆಲೆ, ಸ್ಕಾರ್ಡು ವಾಯುನೆಲೆ, ಕರಾಚಿ ಬಳಿಯ ಭೋಲಾರಿ ವಾಯುನೆಲೆ ಮತ್ತು ಜಕೋಬಾಬಾದ್ ವಾಯುನೆಲೆಯ ಮೇಲೆ ದಾಳಿ ಮಾಡಿತು. ಚುನಿಯನ್ ರಾಡಾರ್ ಸ್ಥಾಪನೆಯನ್ನು ಸಹ ಧ್ವಂಸ ಮಾಡಲಾಗಿದೆ.
ನೂರ್ ಖಾನ್ ಮತ್ತು ರಫೀಕಿ ವಾಯುನೆಲೆಗಳ ಮೇಲಿನ ದಾಳಿಯು ನಿರ್ಣಾಯಕವಾಗಿತ್ತು ಇದು ಪಾಕಿಸ್ತಾನದ ವಾಯು ಲಾಜಿಸ್ಟಿಕ್ಸ್ ಹೊಂದಿದೆ.