ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ.
ದುಬೈನಲ್ಲಿ ನಡದ ಈ ಪಂದ್ಯದಲ್ಲಿ ಭಾರತ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಮಿಂಚಿನ ಪ್ರದರ್ಶನ ನೀಡಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಸೆಮಿಫೈನಲ್ ಸ್ಥಾನ ಖಚಿತಪಡಿಸಿದೆ.
ಪಾಕಿಸ್ತಾನದ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರಿಸಿದ್ದು, ಶತಕದಾಟವಾಡಿದರು.
ಪಾಕಿಸ್ತಾನ ತಂಡವನ್ನು 241 ರನ್‌ಗೆ ಆಲೌಟ್ ಮಾಡಿದ ಟೀಂ ಇಂಡಿಯಾ ಚೇಸಿಂಗ್ ಇಳಿದಿತ್ತು. ರೋಹಿತ್ ಶರ್ಮಾ ಹಾಗೂ ಶುಬಮನ್ ಗಿಲ್ ಉತ್ತಮ ಆರಂಭ ನೀಡಿದರು. ರೋಹಿತ್ 20 ರನ್ ಸಿಡಿಸಿ ನಿರ್ಗಮಿಸಿದರು. ಗಿಲ್ ಹಾಗೂ ವಿರಾಟ್ ಕೊಹ್ಲಿ ಜೊತೆಯಾಟ ಪಾಕಿಸ್ತಾನದ ಎಲ್ಲಾ ಲೆಕ್ಕಾಚಾರ ಉಲ್ಟಾ ಮಾಡಿತು. ಗಿಲ್ 46 ರನ್ ಸಿಡಿಸಿ ಔಟಾದರು.
ಇತ್ತ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಜೊತೆಯಾಟ ಭಾರತದ ಗೆಲುವು ಖಚಿತಪಡಿಸಿತು. ಇತ್ತ ಶ್ರೇಯಸ್ ಅಯ್ಯರ್ ಕೂಡ ಅರ್ಧಶತಕ ಸಿಡಿಸಿದರು. ಇತ್ತ ಹಾರ್ದಿಕ್ ಪಾಂಡ್ಯ 8 ರನ್ ಸಿಡಿಸಿ ಔಟಾದರು. ಬಳಿಕ ಗೆಲುವಿನ ಹಾದಿಯಲ್ಲಿದ್ದ ಭಾರತವನ್ನು ಬೌಂಡರಿ ಸಿಡಿಸುವ ಮೂಲಕ ದಡ ಸೇರಿದ ಕೊಹ್ಲಿ ಶತಕ ಪೂರೈಸಿದರು.