ಹೊಸದಿಗಂತ ಡಿಜಿಟಲ್ ಡೆಸ್ಕ್:
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಯ 14ನೇ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಪ್ರಾರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ, ಎದುರಾಳಿ ಬೌಲರ್‌ಗಳನ್ನು ತತ್ತರಗೊಳಿಸಿ ಪಂದ್ಯವನ್ನು ಸುಲಭವಾಗಿ ತನ್ನದಾಗಿಸಿಕೊಂಡಿತು.
ಮೊದಲು ಟಾಸ್ ಗೆದ್ದ ಭಾರತ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಪಾಕಿಸ್ತಾನ ಪರ ಆರಂಭಿಕ ಸಾಹಿಬ್‌ಝಾದ ಫರ್ಹಾನ್ 45 ಎಸೆತಗಳಲ್ಲಿ 58 ರನ್ ಬಾರಿಸಿ ತಂಡಕ್ಕೆ ಬಲ ನೀಡಿದರು. ಸೈಮ್ ಅಯೂಬ್ 21 ಹಾಗೂ ಫಹೀಮ್ ಅಶ್ರಫ್ 20 ರನ್ ಸೇರಿಸಿದರೆ, ಇತರರಿಂದ ಹೆಚ್ಚಿನ ಕೊಡುಗೆ ಬರಲಿಲ್ಲ. ಈ ಮೂಲಕ ಪಾಕಿಸ್ತಾನ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು.
ಗುರಿ ಬೆನ್ನಟ್ಟಿದ ಭಾರತಕ್ಕೆ ಅಭಿಷೇಕ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದರು. ಅಭಿಷೇಕ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಒಟ್ಟಾರೆ 74 ರನ್ ಸೇರಿಸಿದರು. ಗಿಲ್ ಕೂಡ 47 ರನ್ ಗಳಿಸಿ ತಂಡದ ವೇಗವನ್ನು ಹೆಚ್ಚಿಸಿದರು. ಮಧ್ಯಂತರದಲ್ಲಿ ಕೆಲವು ವಿಕೆಟ್‌ಗಳು ಕಳೆದುಕೊಂಡರೂ, ತಿಲಕ್ ವರ್ಮಾ ಮತ್ತು ಹಾರ್ದಿಕ್ ಪಾಂಡ್ಯ ವಿಶ್ವಾಸಾರ್ಹ ಜೊತೆಯಾಟ ಕಟ್ಟಿಕೊಟ್ಟು ಭಾರತವನ್ನು 18.5 ಓವರ್‌ಗಳಲ್ಲಿ ಗುರಿ ತಲುಪಿಸಿದರು.
ಭಾರತ ಪ್ಲೇಯಿಂಗ್ ಇಲೆವೆನ್: ಅಭಿಷೇಕ್ ಶರ್ಮಾ, ಶುಭ್‌ಮನ್ ಗಿಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್: ಸಾಹಿಬ್‌ಝಾದ ಫರ್ಹಾನ್, ಸೈಮ್ ಅಯೂಬ್, ಫಖರ್ ಝಮಾನ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಸಲ್ಮಾನ್ ಅಲಿ ಅಘಾ (ನಾಯಕ), ಮೊಹಮ್ಮದ್ ನವಾಝ್, ಹುಸೈನ್ ತಲಾತ್, ಶಾಹೀನ್ ಶಾ ಆಫ್ರಿದಿ, ಫಹೀಮ್ ಅಶ್ರಫ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್.