Sunday, October 12, 2025

ಮಹಿಳಾ ವಿಶ್ವಕಪ್​ನಲ್ಲಿ ಪಾಕಿಸ್ತಾನಕ್ಕೆ ಮುಖಭಂಗ: ಆಸ್ಟ್ರೇಲಿಯಾ ವಿರುದ್ಧ ಸೋತು ಸೆಮಿಫೈನಲ್‌ ರೇಸ್​​ನಿಂದ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

2025 ರ ಮಹಿಳಾ ವಿಶ್ವಕಪ್​ನ 9ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ತಂಡ 107 ರನ್​ಗಳಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಅನುಭವಿ ಬೆಥ್ ಮೂನಿ ಅವರ ಶತಕದ ನೆರವಿನಿಂದ 221 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 114 ರನ್​​ಗಳಿಗೆ ಆಲೌಟ್ ಆಗುವ ಮೂಲಕ ಈ ಟೂರ್ನಿಯಲ್ಲಿ ಸತತ ಮೂರನೇ ಪಂದ್ಯದಲ್ಲಿ ಸೋಲಿಗೆ ಕೊರಳೊಡ್ಡಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 221 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.

ಈ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡವು ಕೂಡ ಕಳಪೆ ಆರಂಭವನ್ನು ಕಂಡಿತು. ತಂಡವು ಕೇವಲ 31 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಸೋಲಿನೊಂದಿಗೆ, ಪಾಕಿಸ್ತಾನ ಮಹಿಳಾ ತಂಡವು ಈಗ ಸೆಮಿಫೈನಲ್‌ ರೇಸ್​​ನಿಂದ ಹೊರಬಿದ್ದಿದೆ.

error: Content is protected !!