ಸಿಂಧೂರದ ಕೆಂಬಣ್ಣಕ್ಕೆ ನಡುಗಿದ ಪಾಕಿಸ್ತಾನ: ಶತ್ರುಗಳಿಗೆ ಪಾಠ ಕಲಿಸ್ತೇವೆ ಎಂದ ಪಾಕ್‌ ಪಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಂಜಾಬ್ ಪ್ರಾಂತ್ಯದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವುದು “ಯುದ್ಧದ ಕೃತ್ಯ” ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದು, “ಸೂಕ್ತ ಪ್ರತ್ಯುತ್ತರ” ನೀಡುವುದಾಗಿ ತಿಳಿಸಿದ್ದಾರೆ.

ಭಾರತ, ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಪಾಕ್‌ ದೃಢಪಡಿಸಿದೆ, ಅಲ್ಲಿನ ಪ್ರಧಾನಿ ಷೆಹ್‌ಬಾಜ್‌ ಷರೀಫ್‌ ಅವರು ಟ್ವೀಟ್‌ ಮಾಡಿದ್ದು, ಪಾಕಿಸ್ತಾನದ ಐದು ಸ್ಥಳಗಳ ಮೇಲೆ ದಾಳಿ ಮಾಡಿದೆ ಎಂದು ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕುತಂತ್ರಿ ವೈರಿಯು ಪಾಕಿಸ್ತಾನದ ಐದು ಸ್ಥಳಗಳ ಮೇಲೆ ಹೇಡಿತನದ ದಾಳಿ ನಡೆಸಿದೆ. ಭಾರತ ಹೇರಿರುವ ಈ ಯುದ್ಧ ಕ್ರಮದ ವಿರುದ್ಧ ಶಕ್ತಿಯುವಾದ ಪ್ರತಿಕ್ರಿಯೆ ನೀಡುವ ಎಲ್ಲ ಹಕ್ಕುಗಳೂ ಪಾಕಿಸ್ತಾನಕ್ಕೆ ಇವೆ. ಮತ್ತು ಅತ್ಯಂತ ಪ್ರಬಲ ಪ್ರತಿಕ್ರಿಯೆಯನ್ನು ನೀಡಲಾಗುತ್ತಿದೆ. ಇಡೀ ದೇಶವು ಪಾಕಿಸ್ತಾನ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ ಎಂದು ಅವರು ಉರ್ದುವಿನಲ್ಲಿ ಪೋಸ್ಟ್‌ ಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!