ಸತತ 8ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ಸೇನೆಯಿಂದ ಸ್ಟ್ರಾಂಗ್‌ ಪ್ರತ್ಯುತ್ತರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಸತತ 8ನೇ ದಿನವೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮೂರು ಗಡಿ ಜಿಲ್ಲೆಗಳಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಸತತ 8ನೇ ದಿನದ ರಾತ್ರಿಯೂ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ನೌಶೇರಾ ಮತ್ತು ಅಖ್ನೂರ್ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ತಿಳಿಸಿದ್ದಾರೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಉಭಯ ರಾಷ್ಟ್ರಗಳ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರತ ಮತ್ತು ಪಾಕಿಸ್ತಾನ ಸೇನೆಗಳ ಕಾರ್ಯಾಚರಣೆ ಮಹಾನಿರ್ದೇಶಕರ (ಡಿಜಿಎಂಒ) ಮಧ್ಯೆ ನಡೆದ ಮಾತುಕತೆ ಬಳಿಕವೂ ಗುಂಡಿನ ಚಕಮಕಿ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯಂತ್ರಣ ರೇಖೆಯಲ್ಲಿ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ವಿಚಾರವಾಗಿ ಭಾರತದ ಮಿಲಿಟರಿ ಕಾರ್ಯಾಚರಣೆ ಮಹಾನಿರ್ದೇಶಕರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!