ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಉಗ್ರ ಪೋಷಕ ರಾಷ್ಟ್ರ ಎಂಬುದು ಮತ್ತೆ ಸಾಬೀತಾಗಿದೆ. ಪಾಕಿಸ್ತಾನ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಉಗ್ರ ಮಸೂದ್ ಅಜರ್‌ನ 14 ಮಂದಿ ಕುಟುಂಬ ಸದಸ್ಯರ ಹತ್ಯೆ ಹಿನ್ನೆಲೆ ಪಾಕಿಸ್ತಾನ ಸರ್ಕಾರ ಮಸೂರ್ ಅಜರ್‌ಗೆ 14 ಕೋಟಿ ರೂ. ಪರಿಹಾರ ಘೋಷಿಸಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ ಪ್ರತೀಕಾರದ ದಾಳಿಯಲ್ಲಿ ನಿಷೇಧಿತ ಉಗ್ರ ಸಂಘಟನೆ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಮಂದಿ ಸೇರಿ 14 ಮಂದಿ ಹತ್ಯೆಯಾಗಿದ್ದಾರೆ.