ಭಯೋತ್ಪಾದನೆ ಮುಂದುವರೆಸಿದಲ್ಲಿ ಪಾಕ್​ ತಕ್ಕ ಪರಿಣಾಮ ಎದುರಿಸಬೇಕಾಗುತ್ತೆ: ಗುಡುಗಿದ ರಾಜನಾಥ್‌ ಸಿಂಗ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭವಿಷ್ಯದಲ್ಲಿ ಭಾರತದ ಮಣ್ಣಿನಲ್ಲಿ ಭಯೋತ್ಪಾದಕ ದಾಳಿ ನಡೆಸಿದರೆ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ. ಆಪರೇಷನ್​ ಸಿಂಧೂರ್​ ಇನ್ನೂ ಮುಗಿದಿಲ್ಲ. ಭಾರತ ಭಯೋತ್ಪಾದನೆ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಿದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಸೇನೆಯ ಉತ್ತರ ಕಮಾಂಡ್‌ನ ಪಡೆಗಳ ಜೊತೆ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಭಾರತದ ವಿರುದ್ಧ ಸಾವಿರಾರು ಕುತಂತ್ರ ನೀತಿ ನಡೆಸಿದರೂ ಅದು ಯಶಸ್ವಿಯಾಗುವುದಿಲ್ಲ ಎಂಬುದು ಆಪರೇಷನ್​ ಸಿಂಧೂರ್​ ಮೂಲಕ ಪಾಕಿಸ್ತಾನಕ್ಕೆ ಮನವರಿಕೆಯಾಗಿದೆ ಎಂದು ತಿಳಿಸಿದರು.

ಆಪರೇಷನ್​ ಸಿಂಧೂರ್​ ಬಳಿಕ ರಕ್ಷಣಾ ಸಚಿವರು ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಈ ಯೋಗ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರ ಜೊತೆಗೆ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್​ ಉಪೇಂದ್ರ ದ್ವಿವೇದಿ ಕೂಡ ಭಾಗಿಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಪರೇಷನ್​ ಸಿಂಧೂರ್​​ ಇನ್ನೂ ಮುಗಿದಿಲ್ಲ. ಈ ಕಾರ್ಯಾಚರಣೆಯ ಮೂಲಕ ನಾವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ. ಪಾಕಿಸ್ತಾನ ಭಯೋತ್ಪಾದನೆಯನ್ನು ಮುಂದುವರೆಸಿದರೆ, ಅದು ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!