ಶಿವಾಜಿ ನೆಲದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಸಹಿಸೋದಿಲ್ಲ, ಕಠಿಣ ಕ್ರಮ ಎದುರಿಸ್ತೀರಿ: ‘ಮಹಾ’ ಸಿಎಂ ಖಡಕ್‌ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎನ್ಐಎ ಗುರುವಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾದ ಕಚೇರಿಗಳ ಮತ್ತು ಕಾರ್ಯಕರ್ತರ ಮೇಲೆ ನಡೆಸಿದ ದಾಳಿ ಖಂಡಿಸಿ ಮಹಾರಾಷ್ಟ್ರದ ಪುಣೆಯ ಜಿಲ್ಲಾಧಿಕಾರಿ ಕಚೇರಿ ಎದುರೂ ದೊಡ್ಡ ಮಟ್ಟದಲ್ಲಿ ಪಿಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದದ್ದು, ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಬಂಧನ ಮಾಡುವ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರು ನಡುವೆ ದೊಡ್ಡ ಮಟ್ಟದ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಾಕಾರರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆ ಕೂಗಿದ್ದಲ್ಲದೆ, ಪೊಲೀಸರನ್ನೇ ಬೆದರಿಸುವ ಪ್ರಯತ್ನ ಮಾಡಿದ್ದಾರೆ .

ಈ ಬಗ್ಗೆ ಮಹಾರಾಷ್ಟ್ರದ ಸಿಎಂ ಏಕನಾಥ್‌ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ತಮ್ಮ ಪ್ರತಿಕ್ರಿಯೆ ನೀಡಿದ್ದು, ಶಿವಾಜಿಯ ನೆಲದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ನಂಥ ಘೋಷಣೆಗಳನ್ನು ಸಹಿಸೋದಿಲ್ಲ. ಇದಕ್ಕಾಗಿ ಕಠಿಣ ಕ್ರಮವನ್ನು ಎದುರಿಸ್ತೀರಿ ಎಂದು ಸರ್ಕಾರ ಎಚ್ಚರಿಸಿದೆ.

ಪುಣೆಯಲ್ಲಿ ದೇಶವಿರೋಧಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳು ಎದ್ದಿದ್ದು, ಇದನ್ನು ಖಂಡಿಸಲೇಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಪೊಲೀಸರು ಖಂಡಿತಾ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆ, ಆದರೆ ಶಿವಾಜಿಯ ನೆಲದಲ್ಲಿ ಇಂತಹ ಘೋಷಣೆಗಳನ್ನು ಸಹಿಸುವುದಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

ಇದೇ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ನಾಗ್ಪುರದಲ್ಲಿ ಮಾತನಾಡಿದ ಫಡ್ನವೀಸ್, ಮಹಾರಾಷ್ಟ್ರ ಅಥವಾ ಭಾರತದಲ್ಲಿ ಯಾರಾದರೂ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದರೆ, ಆ ವ್ಯಕ್ತಿಯನ್ನು ಬಿಡಲಾಗುವುದಿಲ್ಲ ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು, ಅವರು ಎಲ್ಲಿದ್ದರೂ, ನಾವು ಅವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!