ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದ ಗಡಿ ಭಾಗಗಳಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 17 ಮಂದಿ ನಾಗರಿಕರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ದಾಳಿ ನಂಗರ್ಹಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆದಿರುವುದಾಗಿ ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಘಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದು, ಮಹಿಳೆಯರು ಹಾಗೂ ಮಕ್ಕಳೂ ಮೃತಪಟ್ಟವರಲ್ಲಿ ಸೇರಿದ್ದಾರೆ. ಈ ದಾಳಿ ಗಡಿ ಭಾಗದಲ್ಲಿ ಉದ್ವಿಗ್ನತೆ ಹೆಚ್ಚಿಸಿದೆ.
ಇದನ್ನೂ ಓದಿ:
ಇದಕ್ಕೆ ಪ್ರತಿಕ್ರಿಯಿಸಿದ ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್, ಇತ್ತೀಚಿನ ಆತ್ಮಹತ್ಯಾ ದಾಳಿಗಳ ಹಿನ್ನೆಲೆ ಗುಪ್ತಚರ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಪಾಕಿಸ್ತಾನಿ ತಾಲಿಬಾನ್ ಮತ್ತು ಅದರ ಸಂಪರ್ಕಿತ ಸಂಘಟನೆಗಳ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಪಾಕಿಸ್ತಾನದಲ್ಲಿ ನಡೆದ ಮಸೀದಿ ದಾಳಿಯಲ್ಲಿ 31 ಮಂದಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ.



