ಅತ್ಯಾಚಾರ ಆರೋಪ: ಲಂಡನ್‌ನಲ್ಲಿ ಪಾಕ್ ಸ್ಟಾರ್ ಕ್ರಿಕೆಟಿಗನ ಬಂಧನ: ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಂಡನ್‌ನ ಮ್ಯಾಂಚೆಸ್ಟರ್ ನಗರದಲ್ಲಿ ಪಾಕಿಸ್ತಾನದ ಕ್ರಿಕೆಟಿಗ ಹೈದರ್ ಅಲಿ ಅವರನ್ನು ಬಲಾತ್ಕಾರ ಆರೋಪದಡಿಯಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿದ್ದ ಪಾಕಿಸ್ತಾನ ‘ಎ’ ತಂಡದ ಸದಸ್ಯನಾಗಿದ್ದ 24 ವರ್ಷದ ಹೈದರ್ ನನ್ನು, ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿತನಿಗೆ ಕಾನೂನು ಸಹಾಯ ಒದಗಿಸಲಾಗುವುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ.

ಹೈದರ್ ವಿರುದ್ಧ ಮ್ಯಾಂಚೆಸ್ಟರ್‌ನ ಯುವತಿಯೊಬ್ಬಳು ದೂರು ದಾಖಲಿಸಿದ್ದರೆಂದು ಬ್ರಿಟಿಷ್ ಮಾಧ್ಯಮಗಳು ವರದಿ ಮಾಡಿವೆ. ಜುಲೈ 23ರಂದು ಮ್ಯಾಂಚೆಸ್ಟರ್‌ನಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪದ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಪೊಲೀಸರು ಹೈದರ್ ಅಲಿಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಜಾಮೀನಿನಲ್ಲಿ ಬಿಡುಗಡೆ ಮಾಡಿದ ಪೊಲೀಸರು, ತನಿಖೆ ಪೂರ್ಣಗೊಳ್ಳುವವರೆಗೆ ಪಾಸ್‌ಪೋರ್ಟ್ ವಶಪಡಿಸಿಕೊಂಡು ಪ್ರಯಾಣ ನಿರ್ಬಂಧ ವಿಧಿಸಿದ್ದಾರೆ.

ಈ ನಡುವೆ, ಪಾಕಿಸ್ತಾನ ತಂಡ ಇಂಗ್ಲೆಂಡ್ ಪ್ರವಾಸದಲ್ಲಿ ಏಕದಿನ ಸರಣಿಯೊಂದನ್ನು ಆಡುತ್ತಿತ್ತು. ಮೊದಲ ಪಂದ್ಯದಲ್ಲಿ 55 ರನ್ ಮತ್ತು ಕೊನೆಯ ಪಂದ್ಯದಲ್ಲಿ 71 ರನ್‌ ಗಳಿಸಿದ ಹೈದರ್ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಈ ಆರೋಪದ ನಂತರ ಅವರು ತಕ್ಷಣವೇ ತಂಡದಿಂದ ಹೊರಹಾಕಲಾಗಿದೆ.

ಇಂಗ್ಲೆಂಡ್‌ನಲ್ಲಿಯೇ ಮುಂದುವರೆದಿರುವ ತನಿಖೆಯಲ್ಲಿ ಹೈದರ್ ಅಲಿ ಸಹಕರಿಸುತ್ತಿದ್ದಾರೆ. ಇನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡಾ ತನ್ನ ಮಟ್ಟಿಗೆ ತನಿಖೆ ನಡೆಸುವುದಾಗಿ ತಿಳಿಸಿದೆ. ಕ್ರಿಕೆಟ್ ಕ್ಷೇತ್ರದಲ್ಲಿ ಪಾಕಿಸ್ತಾನ ಆಟಗಾರರ ವಿರುದ್ಧ ಇದಕ್ಕೂ ಮುನ್ನವೂ ಅನೇಕ ವಿವಾದಗಳು ಎದುರಾಗಿದ್ದವು. 2010ರಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಈ ವಿಷಯಕ್ಕೆ ಉದಾಹರಣೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!