ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಮತ್ತೆ ನುಸುಳಲು ಯತ್ನಿಸಿದ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಭಾರತೀಯ ಸೇನೆ ಇಂದು ಹಿಮ್ಮೆಟ್ಟಿಸಿದೆ.
ಕೇರನ್ ಸೆಕ್ಟರ್‌ನ ಜೋಧಾ ಮಕಾನ್-ಬಿರಂಡೋರಿ ಪ್ರದೇಶದ ಬಳಿ ಸುಮಾರು 15 ಡ್ರೋನ್‌ಗಳು ಹಾರುತ್ತಿರುವುದು ಕಂಡುಬಂದಿದ್ದು, ಸೇನಾ ಪಡೆಗಳು ತಕ್ಷಣ ಕ್ರಮ ಕೈಗೊಂಡವು.
ಈ ಘಟನೆಯಲ್ಲಿ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿಲ್ಲ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



