ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಭರ್ಜರಿ ಜಯ ಸಾಧಿಸುವ ಮೂಲಕ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.
ಇದರ ಬೆನ್ನಲ್ಲೇ ವಿಶ್ವದಲ್ಲಿರುವ ಗಣ್ಯ ನಾಯಕರೆಲ್ಲಾ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರುತ್ತಿದ್ದಾರೆ.
ಈ ನಡುವೆಯೇ ಪಾಕಿಸ್ತಾನದ ಯುವತಿಯೊಬ್ಬಳು ನೀಡಿರುವ ಹೇಳಿಕೆ ಸಖತ್ ವೈರಲ್ ಆಗುತ್ತಿದೆ.
ಅದೇನೆಂದರೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದವರಾದ ಮೆಲಾನಿಯಾ ಎಂಬ ಯುವತಿಯೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ತಂದೆ ಎಂದು ಹೇಳಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಯುವತಿ ಮೆಲಾನಿಯಾ, ನಾನು ಮುಸ್ಲಿಂ ಮತ್ತು ಪಂಜಾಬ್ ಪ್ರಾಂತ್ಯಕ್ಕೆ ಸೇರಿದವಳು. ನನ್ನ ತಂದೆ ಟ್ರಂಪ್ ಎಂದು ಹೇಳಿರುವ ಯುವತಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳದ ಕಾರಣ ನನ್ನ ತಾಯಿ ನನ್ನನ್ನು ಪಾಕಿಸ್ತಾನಕ್ಕೆ ಕರೆದುಕೊಂಡು ಬಂದರು ಎಂದು ಹೇಳಿದ್ದು, ಈ ವಿಡಿಯೋ ಹೊಸ ಚರ್ಚೆಯನ್ನ ಹುಟ್ಟುಹಾಕಿದೆ.
ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾದ ಬಳಿಕ ಈ ವಿಡಿಯೋ ಮುನ್ನೆಲೆಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.