ಜಮ್ಮು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಬಂಧಿಸಿದ ಬಿಎಸ್‌ಎಫ್

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಭಾರತದ ಗಡಿಯೊಳಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೆರೆಹಿಡಿದಿದೆ.
ಸಿಯಾಲ್‌ಕೋಟ್‌ನ ನಿವಾಸಿ ಮೊಹಮ್ಮದ್ ಶಬಾದ್ (45) ಬಂಧಿತ ವ್ಯಕ್ತಿ. ಗಡಿಯಾಚೆಯಿಂದ ಅರ್ನಿಯಾ ಸೆಕ್ಟರ್‌ಗೆ ನುಸುಳಲು ಪ್ರಯತ್ನಿಸುತ್ತಿದ್ದಾಗ ಬಿಎಸ್‌ಎಫ್ ಸಿಬ್ಬಂದಿ ಆತನ ಚಲನವಲನವನ್ನು ಗಮನಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಅವನ ಬಳಿ ಯಾವುದೇ ಶಸ್ತ್ರಾಸ್ತ್ರಗಳು ಅಥವಾ ಮಾದಕವಸ್ತು ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 25 ರಂದು, ಸಾಂಬಾ ಜಿಲ್ಲೆಯ ಗಡಿಪ್ರದೇಶದಲ್ಲಿ ಪಾಕಿಸ್ತಾನಿ ನುಸುಳುಕೋರನಿಂದ 8 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದ ಬಿಎಸ್‌ಎಫ್ ಕಳ್ಳಸಾಗಣೆದಾರರ ಪ್ರಯತ್ನವನ್ನು ವಿಫಲಗೊಳಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!