Saturday, March 25, 2023

Latest Posts

ಪಂಜಾಬ್‌ನ ಅಮೃತಸರದಲ್ಲಿ ಪಾಕಿಸ್ತಾನಿ ಒಳನುಸುಳುಕೋರನ ಬಂಧಿಸಿದ ಬಿಎಸ್‌ಎಫ್

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಪಂಜಾಬ್‌ನ ಅಮೃತಸರದಲ್ಲಿ ಇಂದು ಮುಂಜಾನೆ ಪಾಕಿಸ್ತಾನಿ ಒಳನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಂಧಿಸಿದೆ.

ಅಮೃತಸರ ಸೆಕ್ಟರ್‌ನ ರಜತಾಲ್‌ನಲ್ಲಿರುವ ಬಾರ್ಡರ್ ಔಟ್ ಪೋಸ್ಟ್‌ನಲ್ಲಿ ಮಾರ್ಚ್ 8-9 ರ ಮಧ್ಯರಾತ್ರಿಯಲ್ಲಿ ಪಾಕಿಸ್ತಾನದ ಕಡೆಯಿಂದ ಭಾರತವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬಿಎಸ್‌ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಕರ್ತವ್ಯ ನಿರತ ಬಿಎಸ್‌ಎಫ್ ಪಡೆಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದು, ನಂತರ ಅವರನ್ನು ಬಂಧಿಸಲಾಗಿದೆ.

ಪ್ರಾಥಮಿಕ ವಿಚಾರಣೆಯ ವೇಳೆ ಆತ ಬಾಂಗ್ಲಾದೇಶದ ಪ್ರಜೆ ಎಂದು ತಿಳಿಸಿದ್ದಾನೆ.
ಆದರೆ ವಿಚಾರಣೆಯನ್ನು ಮುಂದುವರಿಸಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!