ಹೊಸದಿಗಂತ ಡಿಜಿಟಲ್ ಡೆಸ್ಕ್
ಐಪಿಎಲ್ ಮಿನಿ ಹರಾಜಿನಲ್ಲಿ ಈ ಬಾರಿ ಪಾಕಿಸ್ತಾನ ಮೂಲದ ಆಟಗಾರ ಸಿಕಂದರ್ ರಾಜಾರನ್ನು ಪಂಜಾಬ್ ಕಿಂಗ್ಸ್ ಖರೀದಿಸಿದೆ.
ಸಿಕಂದರ್ ರಾಜಾ ಮೂಲತಃ ಪಾಕಿಸ್ತಾನದವರಾದರೂ ಜಿಂಬಾಬ್ವೆ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದು, ಹೀಗಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಸಿಕಂದರ್ ರಾಜಾ ಕಾಣಿಸಿಕೊಂಡಿದ್ದರು. ಅವರನ್ನು ಪಂಜಾಬ್ ಕಿಂಗ್ಸ್ ತಂಡ 50 ಲಕ್ಷ ರೂ.ಗೆ ಖರೀದಿಸಿದೆ.
ಸಿಕಂದರ್ ರಾಜಾ ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್ನಲ್ಲಿ ಜಿಂಬಾಬ್ವೆ ಪರ ಮ್ಯಾಚ್ ವಿನ್ನಿಂಗ್ ಫರ್ಫಾಮೆನ್ಸ್ ತೋರಿದ್ದರು. ಹಾಗಾಗಿ ಐಪಿಎಲ್ನಲ್ಲಿ ಅವಕಾಶ ಪಡೆದಿದ್ದಾರೆ.