ಅಪ್ಘಾನಿಸ್ತಾನ ಗಡಿಯಲ್ಲಿ 54 ಉಗ್ರರನ್ನು ಕೊಂದ ಪಾಕ್ ಭದ್ರತಾ ಪಡೆಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಅಪ್ಘಾನಿಸ್ತಾನ- ಪಾಕಿಸ್ತಾನದ ಗಡಿಯಲ್ಲಿ ತೆಹರಿಕ್ ಎ ತಾಲಿಬಾನ್ ಪಾಕಿಸ್ತಾನ್ (TTP) ಸಂಘಟನೆಯ 54 ಉಗ್ರರನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ಭಾನುವಾರ ಹೇಳಿಕೊಂಡಿದೆ.

ಖೈಬರ್ ಪಂಕ್ತುವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಬಳಿ ಉಗ್ರರ ಗುಂಪನ್ನು ಪತ್ತೆ ಹಚ್ಚಿದ ಪಾಕ್ ಭದ್ರತಾ ಪಡೆಗಳು ಗುಂಡಿನ ಕಾಳಗ ನಡೆಸಿರುವುದಾಗಿ ಅಂತರ್ ಸೇವಾ ಸಾರ್ವಜನಿಕ ಸಂಪರ್ಕ (ISPR) ಹೇಳಿಕೆಯಲ್ಲಿ ತಿಳಿಸಿದೆ.

ಭದ್ರತಾ ಪಡೆಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ 54 ಉಗ್ರರನ್ನು ಹೊಡೆದುರುಳಿಸಲಾಗಿದೆ. ಅಪಾರ ಪ್ರಮಾಣದ ಶಸಾಸ್ತ್ರಗಳು, ಮದ್ದುಗುಂಡುಗಳನ್ನು ವಶಕ್ಕೆ ಪಡೆದಿರುವುದಾಗಿ ಹೇಳಿಕೊಂಡಿದೆ. ಅಫ್ಘಾನಿಸ್ತಾನದಿಂದ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಭದ್ರತಾ ಪಡೆಗಳನ್ನು ಪ್ರಧಾನಿ ಶೆಹಬಾಜ್ ಷರೀಫ್ ಶ್ಲಾಘಿಸಿದ್ದಾರೆ.

ಇತ್ತೀಚಿಗೆ ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ 26 ಭಾರತೀಯ ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಘಟನೆಗೆ ಜಗತ್ತಿನಾದ್ಯಂತ ಖಂಡನೆ ವ್ಯಕ್ತವಾಗಿದ್ದು, ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.ಈ ನಡುವೆ 54 ಉಗ್ರರನ್ನು ಹತ್ಯೆ ಮಾಡಿರುವುದಾಗಿ ಹೇಳುವ ಪಾಕಿಸ್ತಾನದ ಹೇಳಿಕೆ ಜಗತ್ತಿನ ಮುಂದೆ ತಾನು ಉಗ್ರರ ವಿರೋಧಿ ಎಂಬುದನ್ನು ತೋರಿಸಿಕೊಳ್ಳುವ ಮತ್ತೊಂದು ನಾಟಕನಾ? ಎಂಬ ಅನುಮಾನಕ್ಕೆ ಕಾರಣವಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!