ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಆಸುಪಾಸಿನಲ್ಲಿ ಪಾಕಿಸ್ತಾನದ ಲಾಂಚ್ಪ್ಯಾಡ್ಗಳನ್ನು(Launchpads) ಧ್ವಂಸಗೊಳಿಸಿದ ವೀಡಿಯೋವನ್ನು ಸೇನೆಯು ಎಡಿಜಿಪಿಐ ಇಂಡಿಯನ್ ಆರ್ಮಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ಗಡಿ ನಿಯಂತ್ರಣ ರೇಖೆಯ ಸಮೀಪವಿರುವ ಲಾಂಚ್ಪ್ಯಾಡ್ಗಳ ಮೂಲಕವೇ ಪಾಕಿಸ್ತಾನದ ಉಗ್ರರು ಭಾರತೀಯ ನಾಗರಿಕರು ಮತ್ತು ಭದ್ರತಾ ಪಡೆಗಳ ಮೇಲೆ ದಾಳಿಯನ್ನು ಯೋಜಿಸುತ್ತಿದ್ದರು. ಇದೀಗ ಭಾರತೀಯ ಸೇನೆಯು ಪಾಕ್ ಉಗ್ರರ ಈ ನೆಲೆಯನ್ನು ಉಡೀಸ್ ಮಾಡುವ ಮೂಲಕ ತಕ್ಕ ಉತ್ತರ ನೀಡಿದೆ.
https://x.com/adgpi/status/1921088019081425002?ref_src=twsrc%5Etfw
ನಿಯಂತ್ರಣ ರೇಖೆಯ ಬಳಿ ಇರುವ ಭಯೋತ್ಪಾದಕ ಉಡಾವಣಾ ನೆಲೆಗಳು, ಹಿಂದೆ ಭಾರತೀಯ ನಾಗರಿಕರು ಮತ್ತು ಭದ್ರತಾ ಪಡೆಗಳ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ಯೋಜಿಸುವ ಮತ್ತು ಕಾರ್ಯಗತಗೊಳಿಸುವ ಕೇಂದ್ರವಾಗಿತ್ತು. ಭಾರತೀಯ ಸೇನೆಯ ತ್ವರಿತ ಮತ್ತು ನಿರ್ಣಾಯಕ ಕ್ರಮವು ಭಯೋತ್ಪಾದಕ ಮೂಲಸೌಕರ್ಯ ಮತ್ತು ಸಾಮರ್ಥ್ಯಗಳಿಗೆ ಗಮನಾರ್ಹ ಹೊಡೆತ ನೀಡಿದೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.