October 9, 2026
Friday, October 9, 2026
spot_img

ಬಾಗೇಪಲ್ಲಿಯಲ್ಲಿ ವಾಸವಿದ್ದ ಪಾಕಿಸ್ತಾನ ಮೂಲದ ಮಹಿಳೆ, ಆಕೆಯ ಪುತ್ರನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ವಾಸಿಸುತ್ತಿದ್ದ ಪಾಕಿಸ್ತಾನ ಮೂಲದ ತಾಯಿ ಹಾಗೂ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಫರ್ಹಾನಾಜ್‌ ಹಾಗೂ ಅವರ ಪುತ್ರ ಮೊಹಮ್ಮದ್‌ ಫರ್ದೀನ್‌ ಖಾನ್‌ನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ದಾರಗಾರೆಪಲ್ಲಿಯ ನಿವಾಸಿ ಅಯೂಬ್‌ ಖಾನ್‌ ಪಾಕಿಸ್ತಾನ ಮೂಲದ ಫರ್ಹಾನಾಜ್‌ ಅವರನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪುತ್ರ ಮೊಹಮ್ಮದ್ ಫರ್ದೀನ್ ಖಾನ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಫರ್ಹಾನಾಜ್ ಹಾಗೂ ಪುತ್ರ ಪಾಕಿಸ್ತಾನದ ಪೌರತ್ವ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳಿಬ್ಬರೂ ಭಾರತೀಯ ಪೌರತ್ವ ಹೊಂದಿರದಿದ್ದರೂ ಅಕ್ರಮವಾಗಿ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಖಾತೆಗಳನ್ನು ಹೊಂದಿರುವ ಆರೋಪವೂ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ದಾಖಲೆಗಳ ಸತ್ಯಾಸತ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಫರ್ಹಾನಾಜ್ ಅವರ ಪತಿ ಅಯೂಬ್ ಖಾನ್ ಪ್ರಸ್ತುತ ಕತಾರ್‌ನಲ್ಲಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಫರ್ಹಾನಾಜ್ ಮತ್ತು ಇಬ್ಬರು ಮಕ್ಕಳು ದಾಸಗಾರೆಪಲ್ಲಿ ಗ್ರಾಮದಲ್ಲೇ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

Must Read