Sunday, November 27, 2022

Latest Posts

ಮೋರಾಬಾದ್ ಮತದಾರರ ಪಟ್ಟಿಯಲ್ಲಿ ಪಾಕ್‌ ಮಹಿಳೆಯ ಹೆಸರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಅಧಿಕಾರಿಗಳ ನಿರ್ಲಕ್ಷ್ಯದ ಫಲವಾಗಿ ಉತ್ತರ ಪ್ರದೇಶದ ಮೊರಾದಾಬಾದ್‌ ನ ಮತದಾರರ ಪಟ್ಟಿಯಲ್ಲಿ ಪಾಕಿಸ್ತಾನಿ ಮಹಿಳೆಯ ಹೆಸರು ಕಾಣಿಸಿಕೊಂಡಿದೆ.
ಸಾಬಾ ಪರ್ವೀನ್ ಎಂಬ ಮಹಿಳೆ 2005 ರಲ್ಲಿ ನದೀಮ್ ಅಹ್ಮದ್ ಎಂಬಾತನನ್ನು ವಿವಾಹವಾದ ನಂತರ ಬಾರತಕ್ಕೆ ಆಗಮಿಸಿ ಮೊರಾದಾಬಾದ್‌ನ ಪಾಕ್ಬರಾ ನಗರ ಪಂಚಾಯತ್ ಪ್ರದೇಶದಲ್ಲಿ ದೀರ್ಘಾವಧಿಯ ವೀಸಾದಲ್ಲಿ ನೆಲೆಸಿದ್ದಾರೆ.  2017ರಲ್ಲಿ ನಗರ ಪಂಚಾಯಿತಿ ಚುನಾವಣೆ ನಡೆದಾಗ ಆಕೆಯ ಹೆಸರು ಮತದಾರರ ಪಟ್ಟಿಯಲ್ಲಿ ಸೇರಿತ್ತು. ನಿಯಮಗಳ ಪ್ರಕಾರ, ಸಬಾ ಅವರು ದೀರ್ಘಾವಧಿಯ ವೀಸಾದಲ್ಲಿ ಭಾರತದಲ್ಲಿ ನೆಲೆಸಿರುವ ಕಾರಣ, ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಸಾಧ್ಯವಿಲ್ಲ. ಇತ್ತೀಚೆಗೆ ಮತದಾರರ ಪಟ್ಟಿಯ ವಿಚಾರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಇದು ಬೆಳಕಿಗೆ ಬಂದ ತಕ್ಷಣ ಆಕೆಯ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದ್ದು ಇಂತಹ ಘಟನೆ ಮರುಕಳಿಸದಂತೆ ಮುಂದೆ ಮುನ್ನೆಚ್ಚರಿಕೆ ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!