ಗಡಿಯಲ್ಲಿ ಮಿತಿಮೀರಿದ ಪಾಕಿಸ್ತಾನ ಹುಚ್ಚಾಟ.. ಪದೇ ಪದೇ ಕದನ ವಿರಾಮ ಉಲ್ಲಂಘನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುಪ್ವಾರಾ, ಉರಿ ಮತ್ತು ಅಖ್ನೂರ್ ಸೆಕ್ಟರ್‌ಗಳಲ್ಲಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆಯು ಸತತ ಏಳನೇ ಬಾರಿಯೂ ಕದನ ವಿರಾಮ ಉಲ್ಲಂಘಿಸಿದೆ. ಅಪ್ರಚೋದಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದೆ, ಇದಕ್ಕೆ ಭಾರತೀಯ ಸೇನೆಯು ತಕ್ಕಂತೆ ಪ್ರತಿಕ್ರಿಯಿಸಿದೆ.

“ಏಪ್ರಿಲ್ 30 ರ ರಾತ್ರಿ, ಪಾಕಿಸ್ತಾನ ಸೇನಾ ಠಾಣೆಗಳು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಕುಪ್ವಾರಾ, ಉರಿ ಮತ್ತು ಅಖ್ನೂರ್ ಎದುರು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದವು. ಇವುಗಳಿಗೆ ಭಾರತೀಯ ಸೇನೆಯು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸಿತು” ಎಂದು ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ಹೇಳಿದ್ದಾರೆ.

ಮಂಗಳವಾರದಂದು, ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿಯ ನಂತರ ಭಾರತವು ಪಾಕಿಸ್ತಾನಕ್ಕೆ ಕದನ ವಿರಾಮ ಉಲ್ಲಂಘನೆಯ ಬಗ್ಗೆ ಎಚ್ಚರಿಕೆ ನೀಡಿತು. 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿದ ನಂತರ, ಪಾಕಿಸ್ತಾನಿ ಪಡೆಗಳು ನಿಯಂತ್ರಣ ರೇಖೆಯ ವಿವಿಧ ಸ್ಥಳಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ತೊಡಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!