ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಇತ್ತೀಚೆಗೆ ಬಂಧಿತರಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪರಮಾಪ್ತ ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅವರನ್ನು ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಈ ಬಗ್ಗೆ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ವಕ್ತಾರ ಝುಲ್ಫಿ ಬುಖಾರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಎರಡು ಬಾರಿ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿದ್ದ ಖುರೇಷಿಯ ಬಂಧನಕ್ಕೆ ನಿರ್ದಿಷ್ಟ ಕಾರಣ ಸ್ಪಷ್ಟವಾಗಿಲ್ಲ ಎಂದು ಪಕ್ಷದ ವಕ್ತಾರ ಜುಲ್ಫಿ ಬುಖಾರಿ ರಾಯಿಟರ್ಸ್‌ಗೆ ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!