ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ಮತ್ತು ಸುತ್ತಲಿನ ರಾಜ್ಯಗಳಲ್ಲಿ ರೈಲ್ವೆ ಹಳಿಗಳನ್ನು ಗುರಿಯಾಗಿಸಿ ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ದೊಡ್ಡ ಸಂಚು ರೂಪಿಸಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆಯನ್ನು ನೀಡಿವೆ.
ರೈಲ್ವೆ ಹಳಿಗಳನ್ನು ಸ್ಫೋಟಿಸಲು ಸಂಚು ರೂಪಿಸಲಾಗುತ್ತಿದ್ದು ಸರಕು ಸಾಗಣೆ ರೈಲುಗಳನ್ನೂ ಹೊಡೆದುರುಳಿಸಲು ಐಎಸ್‌ಐ ಯೋಜನೆ ಹಾಕಿಕೊಂಡಿದೆ. ಇವುಗಳನ್ನು ಗುರಿಯಾಗಿಸಲು ಐಎಸ್‌ಐ ಭಾರತದಲ್ಲಿನ ತನ್ನ ಕಾರ್ಯಕರ್ತರಿಗೆ ದೊಡ್ಡ ಪ್ರಮಾಣದಲ್ಲಿ ಹಣ ನೀಡುತ್ತಿದೆ. ಭಾರತದಲ್ಲಿ ಇರುವ ಪಾಕಿಸ್ತಾನದ ಸ್ಲೀಪರ್ ಸೆಲ್‌ಗಳಿಗೆ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಭಾರಿ ಮೊತ್ತವನ್ನು ನೀಡಲಾಗುತ್ತಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆಯಲ್ಲಿ ತಿಳಿಸಿವೆ ಎಂದು ಮೂಲಗಳು ವರದಿ ಮಾಡಿವೆ.