ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ(ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ, ಉಗ್ರರ ಗುಂಪುಗಳೊಂದಿಗಿನ ಸಂಬಂಧಕ್ಕೆ ಪಾಕಿಸ್ತಾನಕ್ಕೆ ಹಳೆಯ ಇತಿಹಾಸವಿದೆ. ನಮಗೂ ಭಯೋತ್ಪಾದಕ ಸಂಘಟನೆಗಳೊಂದಿಗೆ ಇದ್ದ ನಂಟು ರಹಸ್ಯವೇನಲ್ಲ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬೆನ್ನಲ್ಲೇ ಮಾತನಾಡಿದ ಬಿಲಾವಲ್ ಭುಟ್ಟೋ, ಪಾಕಿಸ್ತಾನದ ಇತಿಹಾಸದ ಬಗ್ಗೆ ಹೇಳುವುದಾದರೆ ಪಾಕಿಸ್ತಾನಕ್ಕೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕವಿದೆ ಎಂಬುದು ರಹಸ್ಯವೇನಲ್ಲ ಅದು ಇತಿಹಾಸವಾಗಿದೆ. ಆದರೆ ಇಂದು ನಾವು ಅದರಲ್ಲಿ ಭಾಗಿಯಾಗಿಲ್ಲ. ಇದು ನಮ್ಮ ಇತಿಹಾಸದ ದುರದೃಷ್ಟಕರ ಭಾಗವಾಗಿದೆ ಎಂಬುದು ನಿಜ ಎಂದು ಹೇಳಿದ್ದಾರೆ.
ಪಾಕಿಸ್ತಾನವು ಹಿಂದೆ ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸಿದೆ ಮತ್ತು ಅವರಿಗೆ ಹಣಕಾಸು ಒದಗಿಸಿದೆ ಎಂದು ರಕ್ಷಣಾ ಸಚಿವ ಖವಾಜಾ ಆಸಿಫ್ ಒಪ್ಪಿಕೊಂಡ ಕೆಲವು ದಿನಗಳ ನಂತರ ಬಿಲಾವಲ್ ಭುಟ್ಟೋ ಈ ಹೇಳಿಕೆ ನೀಡಿದ್ದಾರೆ.