ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಚರ್ಚೆಗೆ ಕಾರಣವಾಗಿರುವ ಪಾಲಕ್ಕಾಡ್ ರೈಲ್ವೆ ವಿಭಾಗ ಮುಚ್ಚುಗಡೆ ಸುದ್ದಿಗೆ ಸಂಬಂಧಿಸಿ ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಈ ವಿಭಾಗವನ್ನು ಮುಚ್ಚುವ ಅಥವಾ ವಿಭಜಿಸುವ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪಾಲಕ್ಕಾಡ್ ವಿಭಾಗದ ವ್ಯವಸ್ಥಾಪಕ ಅರುಣ್ ಕುಮಾರ್ ಚತುರ್ವೇದಿ, ಇದೊಂದು ಆಧಾರ ರಹಿತ ವದಂತಿ ಎಂದು ಹೇಳಿದ್ದಾರೆ.
ಪಾಲಕ್ಕಾಡ್ ರೈಲ್ವೆ ವಿಭಾಗ ಮುಚ್ಚಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಲು ಆರಂಭವಾದ ಬೆನ್ನಿಗೇ ವ್ಯಾಪಕ ಆಕ್ರೋಶಗಳು ಕೇಳಿಬರಲಾರಂಭಿಸಿದ್ದವು. ಕರ್ನಾಟಕದ ಲಾಬಿಗಾಗಿ ಭಾರತೀಯ ರೈಲ್ವೇ ಇಂತಹ ನಿರ್ಧಾರ ಕೈಗೊಂಡಿದೆ ಎಂಬ ಆರೋಪವೂ ವ್ಯಕ್ತವಾಗಿತ್ತು. ಈ ಎಲ್ಲಾ ಬೆಳವಣಿಗೆಗಗಳ ನಡುವೆ ರೈಲ್ವೆ ಸ್ಪಷ್ಟನೆ ನೀಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದೆ.