ಆಧಾರ್​ ಪ್ಯಾನ್​ ಲಿಂಕ್​ಗೆ ನಾಳೆಯೇ ಕೊನೆಯ ದಿನ.. ಆಧಾರ್ ಜೋಡಣೆ ಮಾಡದಿದ್ರೆ ಪಾನ್ ಕಾರ್ಡ್ ನಿಷ್ಕ್ರಿಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಧಾರ್-ಪಾನ್ ಕಾರ್ಡ್ ಜೋಡಣೆಗೆ ನಾಳೆಯೇ ಕೊನೆ ದಿನವಾಗಿದೆ. ಆಧಾರ್ ಜೋಡಣೆ ಮಾಡದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ.

ಬ್ಯಾಂಕ್, ಆರ್ಥಿಕ ಚಟುವಟಿಕೆಗಳಿಗೆ ಪಾನ್ ಕಾರ್ಡ್-ಆಧಾರ್ ಕಾರ್ಡ್ ಜೋಡಣೆ ಕಡ್ಡಾಯವಾಗಿದ್ದು, ಬ್ಯಾಂಕ್ ಖಾತೆ ತೆರೆಯಲು, ನಿಗದಿತ ಠೇವಣಿಗಳಲ್ಲಿ ಹೂಡಿಕೆ ಮಾಡಲು, ಡಿಮ್ಯಾಟ್ ಅಕೌಂಟ್ ತೆರೆಯಲು ಪಾನ್ ಕಾರ್ಡ್ ಸಂಖ್ಯೆ ಕಡ್ಡಾಯವಾಗಿದೆ.

ನಾಳೆಯೊಳಗೆ ಆಧಾರ್ ಜೋಡಣೆ ಮಾಡಿಸದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ. ನಿಗದಿತ ಗಡುವಿನೊಳಗೆ ಪ್ಯಾನ್​- ಆಧಾರ್ ಲಿಂಕ್​ ಮಾಡಿದಲ್ಲಿ ವಿಳಂಬ ಶುಲ್ಕವಾದ 1 ಸಾವಿರ ರೂ. ಮಾತ್ರ ಪಾವತಿಸಬೇಕು. ಇಲ್ಲವಾದರೆ 10 ಸಾವಿರ ದಂಡ ಪಾವತಿಸಬೇಕಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!