ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಢದಲ್ಲಿ ಜಯ ಸಾಧಿಸಿರುವ ಬಿಜೆಪಿ (BJP) ಗೆದ್ದು ಸಂಭ್ರಮಿಸುತ್ತಿದ್ದು, ಈ ನಡುವೆ ಪಾಕ್ (Pakistan) ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ (Danish Kaneria) ರಾಹುಲ್ ಗಾಂಧಿಯವರಿಗೆ (Rahul Gandhi) ಪರೋಕ್ಷವಾಗಿ ಮಾತನಾಡಿದ್ದಾರೆ.
ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನತ್ತ ಮುನ್ನುಗ್ಗುತ್ತಿದ್ದಂತೆ ಕನೇರಿಯಾ, ಯಾವ ಪಕ್ಷ ಹಾಗೂ ಯಾರ ಹೆಸರನ್ನೂ ತೆಗೆದುಕೊಳ್ಳದೆ ತಮ್ಮ ಎಕ್ಸ್ ಖಾತೆಯಲ್ಲಿ ಪನೌತಿ ಕೌನ್? ಎಂದು ಬರೆದುಕೊಂಡು ನಗುವ ಎಮೋಜಿಯೊಂದಿಗೆ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ಮೋದಿಯವರನ್ನು ಪನೌತಿ ಎಂದಿದ್ದ ರಾಹುಲ್ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ನ.19 ರಂದು ಏಕದಿನ ವಿಶ್ವಕಪ್ ಫೈನಲ್ ಪಂದ್ಯವ ವೇಳೆ ನರೇಂದ್ರ ಮೋದಿಯವರು (Narendra Modi) ಕ್ರೀಡಾಂಗಣಕ್ಕೆ ತೆರಳಿ ಪಂದ್ಯ ವೀಕ್ಷಿಸಿದ ಕಾರಣ ಭಾರತ ಸೋಲನ್ನು ಅನುಭವಿಸಿತು ಎಂದು ರಾಹುಲ್ ಗಾಂಧಿ ಟೀಕಿಸಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.
ದಾನಿಶ್ ಕನೇರಿಯಾ ಅವರು ಪಾಕ್ ತಂಡದ ಪ್ರಮುಖ ಸ್ಪಿನ್ನರ್ ಆಗಿದ್ದರು. ಅವರ ಸೋದರ ಸಂಬಂಧಿ ಅನಿಲ್ ದಲ್ಪತ್ ನಂತರ ಪಾಕ್ ಪರ ಆಡಿದ 2ನೇ ಹಿಂದೂ ಆಟಗಾರರಾಗಿದ್ದಾರೆ.