ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದ ಶಿವಾನಂದ ಶಿವಯೋಯೋಗಿ ರಾಜೇಂದ್ರ ಶ್ರೀಗಳು ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಈ ಬಾರಿ ಆಕಾಶದಿಂದ ಆಪತ್ತು ಕಾದಿದೆ ಎಂದು ಹೇಳಿದ್ದಾರೆ.
ಪಂಚ ಭೂತಗಳಿಂದಲೂ ದೇಶಕ್ಕೆ ತೊಂದರೆ ಇದೆ. ಆದರೆ ಆಗಸದಿಂದ ಅಪಾಯ ಸಂಭವಿಸಲಿದೆ ಎಂದು ಹೇಳಿದ್ದಾರೆ.
ಕೋಡಿಮಠದಲ್ಲಿ ಮಾತನಾಡಿದ ಸ್ವಾಮೀಜಿ, ಈ ವರ್ಷ ಮಳೆಯಿಂದ ದೇಶದಲ್ಲಿ ತೊಂದರೆ ಸಂಭವಿಸಲಿದೆ ಎಂದು ಹೇಳಿದ್ದೆ. ಇನ್ನೂ ಕೂಡ ಮಳೆ ಮುಂದುವರೆಯಲಿದೆ. ನಮಗೆ ಪಂಚ ಶಕ್ತಿಗಳಿಂದಲೂ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ, ಪ್ರಕೃತಿ ಸೇರಿದಂತೆ ಎಲ್ಲಾ ಕಡೆ ತೊಂದರೆಯಾಗುತ್ತದೆ. ಆಕಾಶದಿಂದ ಸಮಸ್ಯೆ ಎದುರಾಗಲಿದೆ. ಜನ ಇದ್ದಕ್ಕಿದ್ದಂತೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತೆ. ಇನ್ನೂ ಅನಾಹುತಗಳು ಸಂಭವಿಸಲಿವೆ ಎಂದು ಎಚ್ಚರಿಸಿದ್ದಾರೆ.
ಗುಡ್ಡ ಹೋಗುತ್ತದೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಅನೇಕ ಪ್ರದೇಶಗಳು ಮುಳುಗುತ್ತವೆ ಎಂದು ಹೇಳಿದ್ದೆ. ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳಾಗಲಿವೆ. ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರಲಿದೆ ಎಂದು ಅವರು ಹೇಳಿದ್ದಾರೆ.
ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್ ಮಾಡಿಸಿದರು. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ ಎಂದು ಕಳೆದ ತಿಂಗಳೇ ಹೇಳಿದ್ದೆ ಎಂದು ಕೋಡಿ ಶ್ರೀ ಮತ್ತೊಮ್ಮೆ ನೆನಪಿಸಿಕೊಂಡರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡರಲ್ಲೂ ಇವೇ ಆಗುವುದು ಎಂದ ಅವರು, ಈ ಮೂಲಕ ಕೇಂದ್ರ ರಾಜ್ಯದಲ್ಲಿ ಅದಿಕಾರ ಚುಕ್ಕಾಣಿ ಹಿಡಿದವರ ಬದಲಾವಣೆ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಹಾಗೆಂದು ಸರ್ಕಾರಕ್ಕೆ ಏನು ತೊಂದರೆ ಆಗಲ್ಲ ಅಂತ ಹೇಳಿದ್ದೆ ಎಂದೂ ಅವರು ಪುನರುಚ್ಚರಿಸಿದರು.