ಹೊಸದಿಗಂತ ಡಿಜಿಟಲ್ ಡೆಸ್ಕ್:
2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದವರು ಒತ್ತಾಯ ಮಾಡುತ್ತಿರುವುದು ಸಂವಿಧಾನ ವಿರೋಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ಪಂಚಮಸಾಲಿಗಳಿಗೆ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಸಂದೇಶ ರವಾನೆ ಮಾಡಿದ್ದಾರೆ.
ವಿಧಾನ ಪರಿಷತ್ ಕಲಾಪದಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪವಾದ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣದ ಬಗ್ಗೆ ಉತ್ತರ ನೀಡುವ ವೇಳೆ ಸಿಎಂ ಸಿದ್ದರಾಮಯ್ಯ ಮೀಸಲಾತಿ ಸಂಬಂಧ ಉತ್ತರ ನೀಡಿದರು. ಈ ವೇಳೆ ಮಾತಾನಾಡಿದ ಸಿಎಂ, ಪಂಚಮಸಾಲಿ ಮೀಸಲಾತಿ ಸಾಧ್ಯವಿಲ್ಲ ಎಂದು ಸಂದೇಶ ಕೊಟ್ಟರು.