ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡದಿದ್ದರೆ ವಿಧಾನಸೌಧ ಮುತ್ತಿಗೆ: ಮೃತ್ಯುಂಜಯ ಸ್ವಾಮೀಜಿ

ಹೊಸದಿಗಂತ ವರದಿ ಬೆಳಗಾವಿ: 

ಡಿ12ರೊಳಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡದಿದ್ದರೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಶುಕ್ರವಾರ ನಡೆದ ಪಂಚಮಸಾಲಿ ಸಮಾವೇಶದಲ್ಲಿ ಮಾತನಾಡಿದ ಶ್ರೀಗಳು ಮಾತನಾಡಿ, ಅನೇಕ ದಿನಗಳಿಂದ ಈ ಬಗ್ಗೆ ಪ್ರತಿಭಟನೆ ನಡೆಯುತ್ತಿದೆ. ಪಂಚಮಸಾಲಿ 2ಎ ಮೀಸಲಾತಿ ನೀಡದಿದ್ದರೆ 25 ಲಕ್ಷ ಜನರೊಂದಿಗೆ ವಿಧಾನ ಸೌಧ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಪಂಚಮಸಾಲಿ ಸಮಾಜ ಕೃಷಿ ಕಾಯಕದಲ್ಲಿ ತೊಡಗಿರುವ ಸಮಾಜ ಮುಂದಿನ ದಿನಗಳಲ್ಲಿ ಮೀಸಲಾತಿ ನೀಡದಿದ್ದರೆ ಉಗ್ರ ಹೋರಾಟ ಎಚ್ಚರಿಕೆಯ ಗಂಟೆಯನ್ನು ಮೊಳಗಿಸಿದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಲಕ್ಷ್ಮೀ ಹೆಬ್ಬಾಳಕರ, ಚನ್ನರಾಜ ಹಟ್ಟಿಹೊಳಿ, ಪ್ರಕಾಶ ಹುಕ್ಕೇರಿ ಸೇರಿದಂತೆ ಹಾಲಿ ಮಾಜಿ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!