Tuesday, March 21, 2023

Latest Posts

ಪಂಚರತ್ನ ರಥಯಾತ್ರೆಯ ಸಮಾರೋಪ: 100 ಕಿ.ಮೀ ರೋಡ್‌ ಶೋ ನಡೆಸಲು ಜೆಡಿಎಸ್‌ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್‌ :
 
ಜೆಡಿಎಸ್‌ (JDS) ಚುನಾವಣಾ ತಯಾರಿಯಲ್ಲಿ ಬ್ಯುಸಿ ಆಗಿದ್ದು, ಇದರ ಭಾಗವಾಗಿ ಪಂಚರತ್ನ (Pancha Ratha) ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯುವ ಮೊದಲು 100 ಕಿ.ಮೀ ರೋಡ್‌ ಶೋ ನಡೆಸಲು ಮುಂದಾಗಿದೆ.

ಮಾರ್ಚ್ 26ರಂದು ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ (Mysuru) ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.

ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾಡಿರದಂಥ ಸಮಾವೇಶ ಅದಾಗಿರುತ್ತದೆ ಎಂದರು.

ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ಬೃಹತ್ ರೋಡ್ ಶೋ ಮಾಡಲಾಗುವುದು. ಆ ರೋಡ್ ಶೋ ದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರನ್ನು (HD Devegowda) ತೆರೆದ ವಾಹನದಲ್ಲಿ ಕರೆದುಕೊಂಡು ಹೋಗಲಾಗುವುದು. ಈ ಸಮಾವೇಶದಲ್ಲಿ ಹತ್ತು ಲಕ್ಷ ಜನ ಸೇರಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!