ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕುತೂಹಲ ಕೆರಳಿಸಿದ ಪಂಚರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ: ಮತಎಣಿಕೆಗೆ ಕ್ಷಣಗಣನೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲೆಡೆ ಕುತೂಹಲ ಮೂಡಿಸಿದ ಪಂಚರಾಜ್ಯ ವಿಧಾನಸಭೆ ಚುನಾವಣೆ ಕಸರತ್ತು ಇಂದು ಮುಕ್ತಾಯಗೊಳ್ಳಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಏಣಿಕೆ ಆರಂಭವಾಗಲಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ್ದು, ಹೀಗಾಗಿ ಮತ ಎಣಿಕೆ ತೀವ್ರ ಕುತೂಹಲ ಕೆರಳಿಸಿದೆ.

ಅಲ್ಲದೆ, ಮತ ಎಣಿಕೆ ಕೇಂದ್ರ ಪ್ರವೇಶಿಸುವ ಅಭ್ಯರ್ಥಿಗಳು ಮತ್ತು ಏಜೆಂಟ್ ಗಳಿಗೆ ಕೊರೋನಾ ನೆಗೆಟಿವ್ ವರದಿ ಅಥವಾ ಕೊರೋನಾ 2 ಡೋಸ್ ಲಸಿಕೆ ಪಡೆದ ದಾಖಲೆ ಹಾಜರಿ ಕಡ್ಡಾಯ ಮಾಡಲಾಗಿದೆ.

ಇನ್ನು ಕೇರಳದಲ್ಲಿ 140 ಕ್ಷೇತ್ರಗಳಿಗೆ 597 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.  ಪುದುಚೇರಿಯಲ್ಲಿ ಎನ್‌ಆರ್‌ ಕಾಂಗ್ರೆಸ್‌-ಬಿಜೆಪಿ ಒಟ್ಟಾಗಿ ಸ್ಪರ್ಧಿಸಿದ್ದು, ಡಿಎಂಕೆ-ಕಾಂಗ್ರೆಸ್ಸನ್ನು ಮಣಿಸಿ ಜಯಗಳಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ಹೇಳಿವೆ.

ಇನ್ನು ತಮಿಳುನಾಡಿನ 234 ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಾಗೂ ಕನ್ಯಾಕುಮಾರಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ತಮಿಳುನಾಡು ರಾಜ್ಯದಲ್ಲಿ ಎಐಎಡಿಎಂಕೆ ಪಕ್ಷ ಜಯಲಲಿತಾ ನಿಧನದ ಬಳಿಕ ಮೊದಲ ಬಾರಿ ಚುನಾವಣೆ ಎದುರಿಸುತ್ತಿದೆ.  ಅಸ್ಸಾಂನಲ್ಲಿ  126 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ.

ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ರಾಜ್ಯಗಳಲ್ಲಿನ ಚುನಾವಣೆ ಫಲಿತಾಂಶದ ಸಂಫೂರ್ಣ ಚಿತ್ರಣ ಮಧ್ಯಾಹ್ನದ ವೇಳೆಗೆ ಸಿಗಲಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss