Saturday, July 2, 2022

Latest Posts

ಪಟ್ಟಣ ಪಂಚಾಯತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಸೋಮವಾರಪೇಟೆ:

ಇಲ್ಲಿನ ಪಟ್ಟಣ ಪಂಚಾಯಿತಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಸೆ.3ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲುಸಲು ಕೊನೆಯ ದಿನವಾದ ಸೋಮವಾರ ಶಾಸಕ ಎಂ.ಪಿ.ರಂಜನ್ ನೇತೃತ್ವದಲ್ಲಿ ವಾರ್ಡ್ ನಂ 1 ರ ಬಸವೇಶ್ವರ ರಸ್ತೆಗೆ ಮೃತ್ಯುಂಜಯ, ವಾರ್ಡ್ ನಂ.3ರ ವಲ್ಲಭಬಾಯಿ ರಸ್ತೆಗೆ ಮೋಹಿನಿ ಅವರುಗಳು ಪಟ್ಟಣದ ವಿದ್ಯಾಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ತೆರಳಿ ಪಟ್ಟಣ ಪಂಚಾಯ್ತಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಜಿಲ್ಲಾ ಕಾನೂನು ಪ್ರಕೋಷ್ಟದ ಅಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್, ಬಿ.ಜೆ.ಪಿ. ಜಿಲ್ಲಾ ಪ್ರದಾನ ಕಾರ್ಯದರ್ಶಿ ಹೆಚ್.ಕೆ.ಮಾದಪ್ಪ, ತಾಲೂಕು ಅಧ್ಯಕ್ಷ ಮನುಕುಮಾರ್ ರೈ, ಕಾರ್ಯದರ್ಶಿ ಮೋಕ್ಷಿತ್ ಹಾಗೂ ಗೌತಮ್, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ನಗರ ಅಧ್ಯಕ್ಷ ಸೋಮೇಶ್ ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss