May 4, 2026
Monday, May 4, 2026
spot_img

ಪಂಚರಾಜ್ಯ ಚುನಾವಣಾ ಫಲಿತಾಂಶ: ಘಟಾನುಘಟಿ ನಾಯಕರಿಗೆ ನಡುಕ, ಯಾರಿಗೆ ಮುನ್ನಡೆ? ಯಾರಿಗೆ ಹಿನ್ನಡೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಹಲವು ಅನಿರೀಕ್ಷಿತ ತಿರುವುಗಳಿಗೆ ಸಾಕ್ಷಿಯಾಗುತ್ತಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದ ಮುಖ್ಯಮಂತ್ರಿಗಳ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಕಂಡುಬಂದಿದೆ.

ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ಭವಾನಿಪುರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆರಂಭಿಕ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದರೂ, ನಂತರದ ಹಂತದಲ್ಲಿ ಚೇತರಿಸಿಕೊಂಡು ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರ ಹಳೆಯ ಆಪ್ತ ಸುವೇಂದು ಅಧಿಕಾರಿಯವರ ವಿರುದ್ಧದ ಈ ಸಮರ ಇಡೀ ದೇಶದ ಗಮನ ಸೆಳೆದಿದೆ.

ತಮಿಳುನಾಡಿನ ಕೊಲತ್ತೂರ್ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಈ ಬಾರಿ ಭಾರೀ ಹಿನ್ನಡೆಯಾಗಿದೆ. ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷದ ಅಭ್ಯರ್ಥಿ ಸ್ಟಾಲಿನ್ ಅವರ ಭದ್ರಕೋಟೆಗೆ ಲಗ್ಗೆ ಇಟ್ಟಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಇತ್ತ ಕೇರಳದ ಧರ್ಮಡಂ ಕ್ಷೇತ್ರದಲ್ಲಿ ಸಿಎಂ ಪಿಣರಾಯಿ ವಿಜಯನ್ ಕೂಡ ಹಿನ್ನಡೆ ಅನುಭವಿಸುತ್ತಿದ್ದು, ಎಡರಂಗಕ್ಕೆ ಆತಂಕ ಶುರುವಾಗಿದೆ.

ಇನ್ನೊಂದೆಡೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಜಲುಕ್ಬರಿ ಕ್ಷೇತ್ರದಲ್ಲಿ ಬೃಹತ್ ಅಂತರದ ಮುನ್ನಡೆ ಸಾಧಿಸುವ ಮೂಲಕ ಹ್ಯಾಟ್ರಿಕ್ ಗೆಲುವಿನತ್ತ ಮುನ್ನಡೆಯುತ್ತಿದ್ದಾರೆ. ಪುದುಚೇರಿಯಲ್ಲೂ ಸಿಎಂ ಎನ್. ರಂಗಸ್ವಾಮಿ ಅವರು ಥಟ್ಟಂಚವಾಡಿ ಕ್ಷೇತ್ರದಲ್ಲಿ ತಮ್ಮ ವರ್ಚಸ್ಸನ್ನು ಉಳಿಸಿಕೊಂಡಿದ್ದು, ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪಶ್ಚಿಮ ಬಂಗಾಳ: ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ.

ತಮಿಳುನಾಡು: ಕೊಲತ್ತೂರ್‌ನಲ್ಲಿ ಸ್ಟಾಲಿನ್‌ಗೆ ಎದುರಾದ ಅಭೂತಪೂರ್ವ ಸವಾಲು.

ಕೇರಳ: ಧರ್ಮಡಂನಲ್ಲಿ ಪಿಣರಾಯಿ ವಿಜಯನ್ ವಿರುದ್ಧ ಯುಡಿಎಫ್ ಮುನ್ನಡೆ.

ಅಸ್ಸಾಂ: ಜಲುಕ್ಬರಿಯಲ್ಲಿ ಹಿಮಂತ ಬಿಸ್ವಾ ಶರ್ಮಾ ಪಾರುಪತ್ಯ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !