ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆಗೊಂಡ ಬಳಿಕ ಎಲ್ಲಾ ಪಕ್ಷಗಳು ಗೆಲುವಿನ ಲೆಕ್ಕಾಚಾರದಲ್ಲಿದ್ದು, ಅಖಾಡಕ್ಕೆ ಬಲಿಷ್ಠ ಅಭ್ಯರ್ಥಿಗಳನ್ನು ಇಳಿಸಲು ಸಿದ್ಧವಾಗುತ್ತಿದೆ. ಇದೀಗ ಬಿಜೆಪಿ ಕೂಡ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದು, ಉತ್ತರಾಖಂಡ್ ವಿಧಾನಸಭೆ ಚುನಾವಣೆಗೆ 59 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಉತ್ತರಾಖಂಡ್‌ನಲ್ಲಿ ಒಟ್ಟು 70 ಕ್ಷೇತ್ರಗಳಿದ್ದು, ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಖತಿಮಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಒಂದು ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಿಸಿಲ್ಲ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹಾಗೂ ಚುನಾವಣಾ ಉಸ್ತುವಾರಿ ಪ್ರಹ್ಲಾದ್ ಜೋಶಿ ಇಂದು ಪಟ್ಟಿ ಬಿಡುಗಡೆ ಮಾಡಿದ್ದಾರೆ.
भारतीय जनता पार्टी की केंद्रीय चुनाव समिति ने उत्तराखंड विधानसभा चुनाव-2022 के लिए निम्नलिखित प्रत्याशियों के नामों पर अपनी स्वीकृति दी है। pic.twitter.com/mcy3UgVEl0
— BJP (@BJP4India) January 20, 2022
ಗೋವಾದ 34 ಅಭ್ಯರ್ಥಿಗಳ ಪಟ್ಟಿ ರಿಲೀಸ್
ಗೋವಾದಲ್ಲೂ ಬಿಜೆಪಿ 34 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ. ಸಿಎಂ ಪ್ರಮೋದ್ ಸಾವಂತ್ ಸಂಕ್ವೆಲಿಮ್‌ನಿಂದ ಹಾಗೂ ಉಪ ಮುಖ್ಯಮಂತ್ರಿ ಮನೋಹರ್ ಅಜಗಾಂವ್ಕರ್ ಮಾರ್ಗೋವ್‌ನಿಂದ ಸ್ಪರ್ಧಿಸಲಿದ್ದಾರೆ.
ಗೋವಾ ಚುನಾವಣೆ ಉಸ್ತುವಾರಿಗಳು ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ದೇವೇಂದ್ರ ಫಡ್ನವೀಸ್ ಅವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.
The Central Election Committee of the BJP has decided the following names for the ensuing General Elections to the Legislative Assembly of Goa. pic.twitter.com/YjDbnTzsU4
— BJP (@BJP4India) January 20, 2022