Wednesday, August 17, 2022

Latest Posts

ಪಂಚ ರಾಜ್ಯ ಚುನಾವಣೆ: ಬಿಜೆಪಿ ಕಚೇರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಉನ್ನತ ನಾಯಕರ ಚರ್ಚೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ, ತಮಿಳುನಾಡು, ಅಸ್ಸಾಂ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಎಲ್ಲ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದ್ದು, ಬಿಜೆಪಿಯಲ್ಲೂ ಸಭೆಗಳು ನಡೆಯುತ್ತಿದೆ.
ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆದಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಕುರಿತು ಚರ್ಚೆ ನಡೆದಿದೆ. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮೊದಲಾದವರು ಭಾಗಿಯಾಗಿದ್ದಾರೆ. ಶೀಘ್ರವೇ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!