ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮ ಪಂಚಾಯತ್ 1 ನೇ ವಾರ್ಡ್ ಚುನಾಯಿತ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ಸದಸ್ಯತ್ವವನ್ನು ಚುನಾವಣಾ ಆಯೋಗ ರದ್ದುಪಡಿಸಿ ಆದೇಶ ಹೊರಡಿಸಿದೆ.
2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲು ಮಾಡದೇ ಇರುವ ಕಾರಣದಿಂದ ರಾಜ್ಯ ಚುನಾವಣಾ ಆಯೋಗವು ಉಲ್ಲೇಖದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಸದರಿಯವರನ್ನು ಗ್ರಾಮ ಪಂಚಾಯತಿ ಸದಸ್ಯತ್ವದಿಂದ ತೆಗೆದುಹಾಕಿ ಹಾಗೂ ಅವರ ಸದಸ್ಯ ಸ್ಥಾನವು ಖಾಲಿ ಎಂದು ಘೋಷಿಸಿದೆ ಬೆಳ್ಳಾರೆ ಗ್ರಾಮ ಪಂಚಾಯತ್ ತಿಳಿಸಿದೆ.